ಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ, 5 ಜನ ಬಂಧನ.

ಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ; 5 ಮಂದಿ ಬಂಧನ


ವೀರಮಾರ್ಗ ನ್ಯೂಸ್ : ಹಾವೇರಿ : ನಗರದ ತರಳಬಾಳು ನಗರದ ಸಮೀಪ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದರೆಂಬ ಆರೋಪದ ಮೇರೆಗೆ ಐವರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದು, ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಪೊಲೀಸ್ ಪ್ರಕಟಣೆಯ ಪ್ರಕಾರ, ಅ.3ರಂದು ಮಧ್ಯಾಹ್ನ ಸುಮಾರು 1.30ರ ವೇಳೆಗೆ ತರಳಬಾಳು ನಗರದ ಸಮೀಪ ಡಿಸಿ ಕಚೇರಿಗೆ ತೆರಳುವ ಸಾರ್ವಜನಿಕ ರಸ್ತೆಯ ಬದಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರೆಂಬ ಮಾಹಿತಿ ಮೇರೆಗೆ ಹಾವೇರಿ ಶಹರ ಪೊಲೀಸರು ಕಾರ್ಯಾಚರಣೆ ನಡೆಸಿದರು.
ಈ ಸಂದರ್ಭದಲ್ಲಿ ಸಾಹೀಲ ಅಹ್ಮದ ಕರ್ಜಗಿ (20), ಸೋಹೆಲ್ ಕುಡಚಿ (20), ಅಬ್ದುಲ್ ಹಾದಿಮನಿ (19), ಮಂಜುನಾಥ ಕಲಕೋಟಿ (18) ಹಾಗೂ ಸುದೀಪ ಕನಕಪ್ಪ (22) ಎಂಬುವರನ್ನು ಬಂಧಿಸಲಾಗಿದೆ. ಮತ್ತೋರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ 10 ಕೆಜಿ 765 ಗ್ರಾಂ ಗಾಂಜಾ ಹಾಗೂ ಗಾಂಜಾ ಸಾಗಾಟಕ್ಕೆ ಬಳಸಲಾಗಿದೆ ಎಂದು ಹೇಳಲಾದ ಸ್ವಿಫ್ಟ್ ಡಿಜೈರ್ ಕಾರು (KA-05 AQ-2038) ವಶಪಡಿಸಿಕೊಳ್ಳಲಾಗಿದೆ. ಜಪ್ತಿಯಾದ ಗಾಂಜಾದ ಅಂದಾಜು ಮೌಲ್ಯ ₹5,38,250 ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಈ ಸಂಬಂಧ ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 137/2026 ದಾಖಲಿಸಲಾಗಿದ್ದು, NDPS ಕಾಯ್ದೆ-1985ರ ಕಲಂ 20(b)(ii)(B) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಂಧಿತ ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕಾರ್ಯಾಚರಣೆ ಪೊಲೀಸ್ ಅಧೀಕ್ಷಕಿ ಯಶೋಧಾ ವಂಟಗೋಡಿ, SP ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಲ್.ವೈ. ಶೀರಕೋಳ ಹಾಗೂ ಹಾವೇರಿ ಉಪವಿಭಾಗದ ಡಿವೈಎಸ್‌ಪಿ ಗಿರಿಮಲ್ಲ ತಳಕಟ್ಟಿ ಅವರ ನೇತೃತ್ವದಲ್ಲಿ ನಡೆದಿದೆ.

Oplus_131072


ಹಾವೇರಿ ಶಹರ ಪೊಲೀಸ್ ಠಾಣೆಯ ಪಿಐ ಮೋತಿಲಾಲ ಆರ್. ಪವಾರ ಅವರ ನೇತೃತ್ವದ ತಂಡ, ಪಿಎಸ್‌ಐಗಳಾದ ಬಿ.ಜಿ. ದೊಡ್ಡಮನಿ, ಎನ್.ಎನ್. ಶಿಶುವಿನಹಾಳ ಹಾಗೂ ಠಾಣೆಯ ಸಿಬ್ಬಂದಿ, ತಾಂತ್ರಿಕ ಸಿಬ್ಬಂದಿ ಮತ್ತು SOCO ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಆರೋಪಿತರ ಮೇಲಿನ ಆರೋಪಗಳು ನ್ಯಾಯಾಲಯದಲ್ಲಿ ಸಾಬೀತಾಗುವವರೆಗೆ ಅವರು ಕಾನೂನಿನ ದೃಷ್ಟಿಯಲ್ಲಿ ಆರೋಪಿತರಾಗಿರುತ್ತಾರೆ. ಹಾವೇರಿ_ಪ್ರಕರಣ #ಹಾವೇರಿ_ಪೊಲೀಸ್
#NDPS_Act ಪ್ರಕಾರ ಪ್ರಕರಣ ದಾಖಲಾಗಿದೆ.