71ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಯಶಸ್ವಿ

ರಾಣೇಬೆನ್ನೂರಿನಲ್ಲಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆಯಿಂದ 71ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಯಶಸ್ವಿ

ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ರಾಣೇಬೆನ್ನೂರು: ನಗರದ ಮೆಡ್ಲೇರಿ ರಸ್ತೆ ಸಮೀಪದ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಭವನದಲ್ಲಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ 71ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ರಾಜ್ಯಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ರೀ ವಾಸಣ್ಣ ಕುಸುಗೂರು ಅವರು ಅಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ ಗಣ್ಯರೊಂದಿಗೆ ದೀಪ ಬೆಳಗಿಸುವ ಮೂಲಕ ನೆರವೇರಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹಾವೇರಿ, ಶ್ರೀ ಹಿರೇಮಠ ಟ್ರಸ್ಟ್, ಯಲ್ಲಾಪುರ, ಎನ್.ಎಸ್. ಸ್ನೇಹ ಜ್ಯೋತಿ ನಗರ ಮತ್ತು ಗ್ರಾಮೀಣ ಸಂಸ್ಥೆ, ರಾಣೇಬೆನ್ನೂರು ಇವರ ಸಹಯೋಗದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಡಾ. ಪ್ರವೀಣ್ ಖನ್ನೂರು ಹಾಗೂ ಡಾ. ಬಸವರಾಜ ಕೆಲಗಾರ ಅವರು ಮಾತನಾಡಿ ಕನ್ನಡ ಭಾಷೆ, ನಾಡು, ನುಡಿ, ಕಲೆ ಮತ್ತು ಸಂಸ್ಕೃತಿಯ ಉಳಿವು ಹಾಗೂ ಬೆಳವಣಿಗೆಯಲ್ಲಿ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳ ಮಹತ್ವವನ್ನು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶ್ರೀ ನಿತ್ಯಾನಂದ ಜಿ. ಕುಂದಾಪುರ ಅವರು ಮಾತನಾಡಿ, ಕನ್ನಡ ನಾಡು, ನೆಲ, ಜಲ, ಭಾಷೆ ಹಾಗೂ ಕರ್ನಾಟಕದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ವೇದಿಕೆ ನಿರಂತರವಾಗಿ ಶ್ರಮಿಸುತ್ತಿದೆ. ಕನ್ನಡ ನಾಡಿನ ಕಲಾವಿದರಿಗೆ ಪ್ರೋತ್ಸಾಹ ನೀಡುವ ಮೂಲಕ ನಮ್ಮ ನೆಲದ ಕಲೆ ಮತ್ತು ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ನಿರೂಪಣೆಯನ್ನು ಜಗದೀಶ ಮಳಿಮಠ ಅವರು ಅಚ್ಚುಕಟ್ಟಾಗಿ ನಿರ್ವಹಿಸಿದರು.

ಈ ಸಂದರ್ಭದಲ್ಲಿ ವಿವಿಧ ಕಲಾವಿದರಾದ ಮಂಜಪ್ಪ ಚಲವಾದಿ, ರವಿಚಂದ್ರ ಕೊರವರ್, ಗೌತಮ್ ಸಾವಕ್ಕನವರ್, ಪ್ರಕಾಶ್ ಗಚ್ಚಿನಮಠ, ಶ್ರೀಮತಿ ಉಮಾ ಹ. ಚಲವಾದಿ ಹಾಗೂ ಶ್ರೀಮತಿ ಉಮಾ ಬ. ಚಲವಾದಿ ಸೇರಿದಂತೆ ಹಲವು ಕಲಾವಿದರು ತಮ್ಮ ಉಪಸ್ಥಿತಿಯಿಂದ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.

ಕಾರ್ಯಕ್ರಮದಲ್ಲಿ ಶ್ರೀ ಪ್ರಭಾಕರ್ ಶಿಗ್ಲಿ, ವಿ.ಎಸ್. ಹಿರೇಮಠ, ಬಸವರಾಜ ಸಾವಕ್ಕನವರ, ಕೊಟ್ರೇಶಪ್ಪ ಎಮ್ಮಿ, ಮಲ್ಲಿಕಾರ್ಜುನ ಸಾವಕ್ಕಳವರ, ಸಿದ್ದರೋಡ ಗುರುಂ, ಚಂದ್ರಪ್ಪ ಬಣಕಾರ, ಸಂಜೀವ ಕನ್ನವಳ್ಳಿ, ಪರಶುರಾಮ ಕುರುವತ್ತಿ, ಗೋಪಿ ಕುಂದಾಪುರ ಬಸವರಾಜ ದಳವಾಯಿ ಆನಂದ ಲಮಾಣಿ, ನಿಂಗಪ್ಪ ಬೀರಣ್ಣನವರ, ಮೃತ್ಯುಂಜಯ ಕರಿಯಜ್ಜಿ, ಭಾಷಾ ಹಂಪಾಪಟ್ಟಣ, ರಿಯಾಜ್ ಅಹ್ಮದ್ ದೊಡ್ಡಮನಿ, ಶಂಕರ ಹಳ್ಳಪ್ಪನವರ, ಮರಡೆಪ್ಪ ಚಳಗೇರಿ, ಅಣ್ಣಪ್ಪ ಛಲವಾದಿ, ಕೃಷ್ಣ ವೇಷಗಾರ,ಮೌನೇಶ ಕಬ್ಬೆರ ವಿರೂಪಾಕ್ಷಿಗೌಡ ಕೆಂಚನಗೌಡ್ರು ಸೇರಿದಂತೆ ಹಲವು ಗಣ್ಯರು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ, ಜಿಲ್ಲಾ, ತಾಲೂಕು ಹಾಗೂ ಗ್ರಾಮ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಕನ್ನಡದ ನೆಲ ನಮ್ಮ ಹೆಮ್ಮೆ, ಕನ್ನಡದ ಜಲ ನಮ್ಮ ಸಂಪತ್ತು, ಕನ್ನಡದ ಭಾಷೆ ನಮ್ಮ ಶಕ್ತಿ, ಕನ್ನಡದ ಸಂಸ್ಕೃತಿ ನಮ್ಮ ಆಸ್ತಿ ಎಂಬ ಆಶಯದೊಂದಿಗೆ 71ನೇ ಕರ್ನಾಟಕ ರಾಜ್ಯೋತ್ಸವದ ಸಾಂಸ್ಕೃತಿಕ ಸಂಭ್ರಮ ಅರ್ಥಪೂರ್ಣವಾಗಿ ನೆರವೇರಿತು.