ಸಂತೇಬೆನ್ನೂರು : ರೈತರ ಜಮೀನೊಂದರಲ್ಲಿ ವಿದ್ಯುತ್ ಪರಿವರ್ತಕ ಅಳವಡಿಸಲು 10,000 ಲಂಚ ಪಡೆಯುತ್ತಿದ್ದ ವೇಳೆ ಇಲ್ಲಿನ ಬೆಸ್ಕಾಂ ಕಚೇರಿಯ ಸಹಾಯಕ ಎಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಸಹಾಯಕ ಎಂಜಿನಿಯರ್ ಅರುಣ್ ಕುಮಾರ್ ವರ್ಷದ ಹಿಂದೆ ಕೆಟ್ಟುಹೋಗಿದ್ದ ವಿದ್ಯುತ್ ಪರಿವರ್ತಕ ಬದಲಾಯಿಸಲು ಮಲ್ಲಾಪುರದ ರೈತ ಬಿ.ಎಂ. ಮಂಜುನಾಥ ಅವರ ಬಳಿ ಲಂಚದ ಬೇಡಿಕೆ ಇಟ್ಟಿದ್ದರು. ಈ ಕುರಿತು ಮಂಜುನಾಥ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ದೂರಿನನ್ವಯ ಲೋಕಾಯುಕ್ತ ಅಧಿಕಾರಿಗಳು ಶನಿವಾರ ಬೆಸ್ಕಾಂ ಕಚೇರಿಗೆ ಭೇಟಿ ನೀಡಿ ಲಂಚ ಪಡೆಯುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆದು ಪ್ರೆರಣ ದಾಖಲಿಸಿದ್ದಾರೆ.
ಲೋಕಾಯುಕ್ತ ಪೊಲೀಸ್ ನಿರೀಕ್ಷಕರಾದ ಎಚ್. ಗುರುಬಸವಸ್ವಾಮಿ, ಪಿ.ಸರಳಾ ಹಾಗೂ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದರು.
