
ವೀರಮಾರ್ಗ ನ್ಯೂಸ್ : ಧಾರವಾಡ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಬಂಗ್ಲೆ, ರಾಜ್ಯ ಉಪಾಧ್ಯಕ್ಷರಾದ ಡಾ. ಎಸ್.ಎಸ್. ಪಾಟೀಲ್ ಹಾಗೂ ಸುಪ್ರೀಂ ಕೋರ್ಟ್ ಹಿರಿಯ ನ್ಯಾಯವಾದಿ ಶ್ರೀ ಮಂಜುನಾಥ ಮಾಡ್ಯಾಳ ಅವರ ನೇತೃತ್ವದಲ್ಲಿ, ಚೇತಕ್ ಟಿವಿ ನ್ಯೂಸ್ 24X7 ಪ್ರೈವೇಟ್ ಲಿಮಿಟೆಡ್‌ನ ಉಪಸಂಪಾದಕರಾದ ಶ್ರೀ ಸಂಗನಗೌಡ ಹೂವನ್ನವರ ಅವರನ್ನು ಧಾರವಾಡ ಜಿಲ್ಲಾ ಅಧ್ಯಕ್ಷರಾಗಿ ನೇಮಕ ಮಾಡಲಾಯಿತು.

ಈ ಸಂದರ್ಭದಲ್ಲಿ ನೇಮಕಾತಿ ಆದೇಶ ಪತ್ರವನ್ನು ಹಸ್ತಾಂತರಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಸಂಘಟನೆಯ ಧಾರವಾಡ ಜಿಲ್ಲೆಯ ಎಲ್ಲಾ ತಾಲೂಕುಗಳ ಅಧ್ಯಕ್ಷರು, ಉಪಾಧ್ಯಕ್ಷರು, ವಿವಿಧ ಪದಾಧಿಕಾರಿಗಳು ಹಾಗೂ ಹಿರಿಯ-ಕಿರಿಯ ಪತ್ರಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.