ಪೋಕ್ಸ ಕೇಸ್ : ಬಿಎಸ್ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಶನ್ ಮಹತ್ವದ ಹೇಳಿಕೆ! ಸಾಕ್ಷಿ ಕೇಳಿದ ಹೈಕೋರ್ಟ್
ವೀರಮಾರ್ಗ ನ್ಯೂಸ್ : ಬೆಂಗಳೂರು : ಪೋಕ್ಸ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪ ಅವರೇ ಒಪ್ಪಿಕೊಂಡಿದ್ದಾರೆ ಎಂದು ವಿಶೇಷ ಸರ್ಕಾರಿ ಅಭಿಯೋಜಕರು ಹೈಕೋರ್ಟ್ನಲ್ಲಿ ಹೇಳಿಕೆ ನೀಡಿದ್ದಾರೆ. ನ್ಯಾಯಾಲಯವು ಸಾಕ್ಷಿ ಕೇಳಿದ್ದು, ಸಂತ್ರಸ್ತೆ ಮಾತ್ರ ಆರೋಪ ಮಾಡುತ್ತಿದ್ದಾರೆ ಎಂದು ವಕೀಲರು ವಾದಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ವಿಚಾರಣೆಯನ್ನು ಅಕ್ಟೋಬರ್ 9ಕ್ಕೆ ಮುಂದೂಡಿದೆ.
ಪೋಕೋ ಕೇಸ್ ಪ್ರಶ್ನಿಸಿ ಬಿಎಸ್ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸಿತು.

ಬೆಂಗಳೂರು : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮೇಲಿನ ಪೋಕೋ ಕೇಸ್ನಲ್ಲಿ ಕರ್ನಾಟಕ ಹೈಕೋರ್ಟ್ಗೆ ವಿಶೇಷ ಸರ್ಕಾರಿ ಅಭಿಯೋಜಕರು (ಪ್ರಾಸಿಕ್ಯೂಟರ್) ಮಹತ್ವದ ಹೇಳಿಕೆ ನೀಡಿದ್ದಾರೆ. ಬಿಎಸ್ ಯಡಿಯೂರಪ್ಪ ಅವರೇ ಒಪ್ಪಿಕೊಂಡಿ ಎಂದು ಪೀಠದ ಮುಂದೆ ಪ್ರಸ್ತಾಪಿಸಿದರು. ಇದಕ್ಕೆ ಕೋರ್ಟ್ ಸಾಕ್ಷಿ ಕೇಳಿತು. ಪೋಕ್ಸೆ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ಸಂಜ್ಞೆ ಪರಿಗಣಿಸಿರುವುದನ್ನು ಪ್ರಶ್ನಿಸಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಮತ್ತು ಇತರರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿ ಎಂ ಐ ಅರುಣ್ ಅವರ ಏಕಸದಸ್ಯ ಪೀಠವು ಗುರುವಾರ ವಿಚಾರಣೆ ನಡೆಸಿತು.