ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲಾ : ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮ ಪಕ್ಕ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಮಾಜಿ ಪತ್ರಕರ್ತ ಗಂಗಾಧರ ಹೂಗಾರ, ಅವರ ಮಗ ಮತ್ತು ಸೊಸೆ ಹುಬ್ಬಳ್ಳಿಯಿಂದ ಹಾವೇರಿಗೆ ಪ್ರಯಾಣಿಸುತ್ತಿದ್ದ ವೇಳೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ವಿಷಯ ತಿಳಿದುಬಂದಿದೆ.
ಭೀಕರ ಅಪಘಾತದಲ್ಲಿ ನವದಂಪತಿ ಸಾವು, ಇಬ್ಬರಿಗೆ ಗಾಯ.
ಹಾವೇರಿ: ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಿಂತಿದ್ದಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ಹಾವೇರಿ ನಗರದ ನಿವಾಸಿಗಳಾದ ಕಾರ್ತಿಕ್ ಹೂಗಾರ (34) ಹಾಗೂ ಐಶ್ವರ್ಯ (30) ಎಂದು ಗುರುತಿಸಲಾಗಿದೆ. ಕಾರ್ತಿಕ ಹೂಗಾರ ಹಿರಿಯ ಪತ್ರಕರ್ತರಾದ ದಿ.ಗಂಗಾಧರ ಹೂಗಾರವರ ಸುಪುತ್ರ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮದುವೆಯಾಗಿ ಕೇವಲ 15 ದಿನಗಳಷ್ಟೇ ಆಗಿದ್ದ ದಂಪತಿ ದೇವರ ದರುಶನಕ್ಕೆ ತೆರಳಿ ಮನೆಗೆ ವಾಪಸ್ಸಾಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಾಶವಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಸೇರಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಸ್ಥಳಕ್ಕೆ ತಡಸ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.
ಕಳೆದ 15 ದಿನಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವ ದಂಪತಿಗಳು ಸಾವು ಬಹಳ ನೋವು ತಂದಿದೆ, ಕುಟುಂಬದ ಸದಸ್ಯರಿಗೆ ಆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.