ಕಾನೂನು ವ್ಯವಸ್ಥೆ ಸಂಪೂರ್ಣ ಹಾವೇರಿ ಜಿಲ್ಲಾ ನಾಶ….ಅಧಿಕಾರಿಗಳುಂಟು ಲೆಕ್ಕಕ್ಕಿಲ್ಲ…..ಕಾನೂನುಂಟು ಪುಸ್ತಕದಲ್ಲಿ….ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿರುವ ಎಸ್ ಪಿ ಮತ್ತು ಡಿಸಿ…..ಮನೆಯಲ್ಲಿ ಮಲಗಿದ್ದ ವ್ಯಕ್ತಿಯ ಬರ್ಬರ ಹತ್ಯೆ.
ವೀರಮಾರ್ಗ ನ್ಯೂಸ್ : ಹಾವೇರಿ ಜಿಲ್ಲೆ ಹಿರೇಕೆರೂರ ಪಟ್ಟಣದಲ್ಲಿ ವ್ಯಕ್ತಿಯೋರ್ವನನ್ನು ಮನೆಯಲ್ಲಿ ಮಲಗಿದ್ದ ವೇಳೆ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ..
ಪಟ್ಟಣದ ಮೇನ್ ರಸ್ತೆಯಲ್ಲಿ ಇರುವ ಬಸವನ ಬೀದಿಯ ನಿವಾಸಿ ಮಹಾಲಿಂಗಪ್ಪ ಮಳವಳ್ಳಿ (೪೧) ಹತ್ಯೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ..
ಶುಕ್ರವಾರ ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ದುಷ್ಕರ್ಮಿಗಳು ಮನೆಗೆ ನುಗ್ಗಿ ಕತ್ತು ಸೀಳಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ..
ಮಧ್ಯರಾತ್ರಿ ಸುಮಾರು ೧ ಗಂಟೆ ಸುಮಾರಿಗೆ ಘಟನೆ ನಡೆದಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ. ಮನೆಯೊಳಗೇ ನಡೆದ ಈ ಭೀಕರ ಹತ್ಯೆಯಿಂದ ಪಟ್ಟಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ..
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಎಫ್ಎಸ್ಎಲ್ ತಂಡವು ಸ್ಥಳದಲ್ಲಿನ ಸಾಕ್ಷ್ಯಗಳನ್ನು ಸಂಗ್ರಹಿಸುವ ಕಾರ್ಯದಲ್ಲಿ ತೊಡಗಿದೆ.
ಕೊಲೆ ಹಿಂದೆ ಇರುವ ನಿಖರ ಕಾರಣ ತಿಳಿದುಬಂದಿಲ್ಲ. ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದ್ದು, ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..