ಫಿಟ್‌ನೆಸ್ ಕ್ಲಬ್‌ಗಳು, ಜಿಮ್‌ಗಳು, ವಾಣಿಜ್ಯ ಮಳಿಗೆಗಳು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳಗಳಲ್ಲಿ ಸಿಸಿಟಿವಿ ವ್ಯವಸ್ಥೆ, ಸುರಕ್ಷತಾ ಕ್ರಮಗಳು ಹಾಗೂ ನಿಯಮ ಪಾಲನೆ.
ಮಹಿಳೆಯರ ಮೇಲೆ ನಡೆಯುತ್ತಿರುವಂತಹ ಅನ್ಯಾಯ ಹಾಗೂ ಅಕ್ರಮ ಸಂಬಂಧಗಳ ಕುರಿತು ಸಂಸಾರ ಬೀದಿಪಾಲ ಆಗುವುದನ್ನು ಕುರಿತು ಮನಗಂಡು ನೇರ ಜಿಲ್ಲಾ ವರಿಷ್ಠಾಧಿಕಾರಿಗಳ ಗಮನಕ್ಕೆ ತಂದು ಕಾನೂನು ರೀತಿ ಕ್ರಮ ಕೈಗೊಳ್ಳಲು ಮಾರ್ಗದರ್ಶನ ಮಾಡಿದ ಎಂಪಿ ಪ್ರಭಾ ಮಲ್ಲಿಕಾರ್ಜುನ್.
ದಾವಣಗೆರೆಯಲ್ಲಿ ಕ್ಲಾಸ್ ಒನ್ ಅಧಿಕಾರಿಗಳ ಹಾಗೂ ಶ್ರೀಮಂತರ ಹೆಣ್ಣುಮಕ್ಕಳ ಜೀವನದ ಜೊತೆ ಆಟವಾಡುತ್ತಿದ್ದ ಜಿಮ್ ಮಾಲೀಕರ ವಿರುದ್ಧ ಅನೇಕ ಆರೋಪಗಳು ಕೇಳಿ ಬಂದಿದ್ದು ಆದರೆ ಯಾವ ಕ್ರಮ ಕೈಗೊಳ್ಳುತ್ತಾರೆ ಎಂದು ಕಾದು ನೋಡಬೇಕಾಗಿದೆ.
ವೀರಮಾರ್ಗ ನ್ಯೂಸ್ : ದಾವಣಗೆರೆ ಜಿಲ್ಲಾ : ಫಿಟ್‌ನೆಸ್ ಕ್ಲಬ್‌ಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ, ಗೃಹಕಚೇರಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಹೆಚ್ ತೆಕ್ಕಣ್ಣವರ್ ಅವರೊಂದಿಗೆ ತುರ್ತು ಸಭೆ ನಡೆಸಿ, ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಯಿತು.
ಜಿಲ್ಲೆಯಾದ್ಯಂತ ಫಿಟ್‌ನೆಸ್ ಕ್ಲಬ್‌ಗಳು, ಜಿಮ್‌ಗಳು, ವಾಣಿಜ್ಯ ಮಳಿಗೆಗಳು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳಗಳಲ್ಲಿ ಸಿಸಿಟಿವಿ ವ್ಯವಸ್ಥೆ, ಸುರಕ್ಷತಾ ಕ್ರಮಗಳು ಹಾಗೂ ನಿಯಮ ಪಾಲನೆ ಕುರಿತು ಪರಿಶೀಲನೆ ನಡೆಸುವುದು.
ಸಂಬಂಧಪಟ್ಟ ಮಾಲೀಕರೊಂದಿಗೆ ಸಭೆ ನಡೆಸಿ ಮಹಿಳಾ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸಬೇಕೆಂದು ಸೂಚನೆ ನೀಡಿದೆ.
ಮಹಿಳಾ ಸುರಕ್ಷತೆ ಕುರಿತು ಕ್ಷೇತ್ರದಾದ್ಯಂತ ವ್ಯಾಪಕ ಜಾಗೃತಿ ಅಭಿಯಾನ ಹಮ್ಮಿಕೊಳ್ಳುವ ಜೊತೆಗೆ ಮಹಿಳೆಯರ ಸಹಾಯವಾಣಿ “ಅಕ್ಕಪಡೆ”ಯ ಕಾರ್ಯನಿರ್ವಹಣೆಯನ್ನು ಮತ್ತಷ್ಟು ಬಲಪಡಿಸಿ, ಅದರ ಪರಿಣಾಮಕಾರಿ ಕಾರ್ಯವೈಖರಿಯನ್ನು ಪರಿಶೀಲಿಸಿ ಅಗತ್ಯ ಸುಧಾರಣೆಗಳನ್ನು ಕೈಗೊಳ್ಳಬೇಕು.
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ತಿಳಿಸಲಾಯಿತು ಎಂದು MP ಪ್ರಭಾ ಮಲ್ಲಿಕಾರ್ಜುನ ತಿಳಿಸಿದ್ದಾರೆ.