ವೀರಮಾರ್ಗ ನ್ಯೂಸ್ : ಬೆಳಗಾವಿಯ ರಾಮದೇವ ಗಲ್ಲಿಯಲ್ಲಿರುವ ವಿ.ಪಿ. ವೇರ್ಣೇಕರ್ ಆಂಡ್ ಸನ್ಸ್ ಚಿನ್ನಾಭರಣ ಅಂಗಡಿಯಲ್ಲಿ ತಾನೇ ಕಳ್ಳತನ ನಡೆಸಿ ದರೋಡೆ ನಡೆದಂತೆ ನಾಟಕವಾಡಿದ ಆರೋಪದ ಮೇಲೆ ಅಂಗಡಿ ಮಾಲೀಕ ಕೃಷ್ಣಾನಂದ ವೇರ್ಣೇಕರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ವಿಮೆ ಹಣ ಪಡೆಯುವ ಉದ್ದೇಶದಿಂದ ಆರೋಪಿ ಈ ಕೃತ್ಯ ಎಸಗಿದ್ದು, ಕದ್ದ ಚಿನ್ನಾಭರಣ ಹಾಗೂ ಇತರೆ ವಸ್ತುಗಳನ್ನು ತನ್ನ ಸ್ಕೂಟಿಯಲ್ಲಿ ಬಚ್ಚಿಟ್ಟಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಪ್ರಕರಣದ ತನಿಖೆ ವೇಳೆ ಪೊಲೀಸರು ಒಟ್ಟು ₹65.95 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ಇತರೆ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಕ್ಯಾಬಿನೆಟ್ ವಿಸ್ತರಣೆ ವಿಚಾರವಾಗಿ ಮಾತುಕತೆ ನಡೆಸಲು ದೆಹಲಿಗೆ ತೆರಳಿದ್ದ ಸಿಎಂ ಡಿಕೆ ಶಿವಕುಮಾರ್ ಬರಿಗೈಯಲ್ಲಿ ವಾಪಸಾಗಿದ್ದಾರೆ…
ಬೆಂಗಳೂರು: ಕ್ಯಾಬಿನೆಟ್ ವಿಸ್ತರಣೆಯಾಗುತ್ತದೆ, ಇಂದೇ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಬಹುದು ಎಂದು ಕಾದಿದ್ದ ಕರ್ನಾಟಕ ಕಾಂಗ್ರೆಸ್ ಶಾಸಕರಿಗೆ ನಿರಾಸೆಯಾಗಿದೆ.
ಕರ್ನಾಟಕದಲ್ಲಿ ಡಿಕೆ ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಎರಡು ತಿಂಗಳಾಗಿವೆ. ಇದುವರೆಗೆ ಸಂಪುಟ ವಿಸ್ತರಣೆಯಾಗಿಲ್ಲ. ರಾಹುಲ್ ಗಾಂಧಿ ವಿದೇಶದಿಂದ ಬಂದ ಮೇಲೆ ವಿಸ್ತರಣೆಯಾಗಲಿದೆ ಎಂದು ನಿರೀಕ್ಷಿಸಲಾಗಿತ್ತು.ಆದರೆ ವಿದೇಶದಿಂದ ಬಂದ ರಾಹುಲ್ ಗಾಂಧಿ ಈಗ ನೀಟ್ ಪ್ರತಿಭಟನೆಯಲ್ಲಿ ಬ್ಯುಸಿಯಾಗಿದ್ದಾರೆ. ನಿನ್ನೆ ಪ್ರಧಾನಿ ಮೋದಿ ನಿವಾಸದ ಮುಂದೆ ಪ್ರತಿಭಟನೆಗೆ ಕೂತಿದ್ದ ರಾಹುಲ್ ರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ನಂತರ ಬಿಡುಗಡೆ ಮಾಡಿದ್ದರು.ಹೀಗಾಗಿ ನಿನ್ನೆ ಕ್ಯಾಬಿನೆಟ್ ವಿಸ್ತರಣೆ ವಿಚಾರವಾಗಿ ಮಾತುಕತೆ ನಡೆಸಲು ದೆಹಲಿಗೆ ತೆರಳಿದ್ದ ಸಿಎಂ ಡಿಕೆ ಶಿವಕುಮಾರ್ ಬರಿಗೈಯಲ್ಲಿ ವಾಪಸಾಗಿದ್ದಾರೆ. ಎಲ್ಲವೂ ಹೈಕಮಾಂಡ್ ತೀರ್ಮಾನದಂತೆ ನಡೆಯಲಿದೆ ಎಂದು ಡಿಕೆ ಶಿವಕುಮಾರ್ ಈಗಾಗಲೇ ಹೇಳಿದ್ದಾರೆ.ಆದರೆ ದಿಲ್ಲಿ ನಾಯಕರು ಸದ್ಯಕ್ಕೆ ಪ್ರತಿಭಟನೆ, ಪಾರ್ಲಿಮೆಂಟ್ ಅಧಿವೇಶನದಲ್ಲಿ ಬ್ಯುಸಿಯಾಗಿದ್ದಾರೆ. ಹೀಗಾಗಿ ಸಚಿವ ಸಂಪುಟ ವಿಸ್ತರಣೆ ವಿಚಾರ ಮತ್ತೆ ಮುಂದೂಡಿಕೆಯಾಗಲಿದೆ.
ವರದಿ: ಚನ್ನೇಶ್ ಕೆ ಎಂ,ಬೆಂಗಳೂರು