ಸಂಗೂರು ಸಕ್ಕರೆ ಕಾರ್ಖಾನೆಗೆ ನೂತನ ಅಧ್ಯಕ್ಷರಾಗಿ ಭುವನೇಶ್ವರ ಶಿಡ್ಲಾಪುರ ಆಯ್ಕೆ
ವೀರಮಾರ್ಗ ನ್ಯೂಸ್ : ಹಾವೇರಿ : ತಾಲೂಕಿನ ಸಂಗೂರು ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆ ನಡೆಯಿತು.
ಈ ಚುನಾವಣೆಯಲ್ಲಿ ಭುವನೇಶ್ವರ ಶಿಡ್ಲಪುರ ಅವರು ಅಧ್ಯಕ್ಷರಾಗಿ ಆಯ್ಕೆಯಾದರೆ ನಾರಾಯಣ ಕಠಾರಿ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
ಅಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಭುವನೇಶ್ವರ ಶಿಡ್ಲಪುರ ಅವರು ಬೆಂಬಲ ಪಡೆದು ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ನಾರಾಯಣ ಕಠಾರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಹಾವೇರಿ ಜಿಲ್ಲಾ ಕಬ್ಬು ಬೆಳೆಗಾರರ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಸಮಾಜದ ಮುಖಂಡರು ಹಾಗೂ ಇನ್ನಿತರ ರೈತ ಸಂಘಟನೆಗಳ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದರು .
ಕಾರ್ಖಾನೆಯ ಅಭಿವೃದ್ಧಿ ಹಾಗೂ ರೈತರ ಹಿತಾಸಕ್ತಿಗೆ ಶ್ರಮಿಸುವಂತೆ ಶುಭ ಹಾರೈಸಿದರು. ಸಂಗೂರು ಸಕ್ಕರೆ ಕಾರ್ಖಾನೆಯ ನೂತನ ಆಡಳಿತ ಮಂಡಳಿಯ ನೇತೃತ್ವದಲ್ಲಿ ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಕಾರ್ಖಾನೆಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ದೊರೆಯಲಿದೆ ಎಂಬ ಆಶಾಭಾವನೆಯನ್ನು ರೈತ ಮುಖಂಡರು ವ್ಯಕ್ತಪಡಿಸಿದರು.