ಭಿಕ್ಷೆಬೇಡುತಿದ್ದ ಅಜ್ಜಿಯ ಮನೆಯಲ್ಲಿ ಲಕ್ಷಲಕ್ಷಹಣ…

ವೀರಮಾರ್ಗ ನ್ಯೂಸ್ : ಸ್ಥಳೀಯರು ಮತ್ತು ಸಂಬಂಧಿಕರು ಒಟ್ಟಾಗಿ ಹಣ ಎಣಿಕೆ ಮಾಡಿದ್ದು, ಬರೋಬ್ಬರಿ 8 ಲಕ್ಷಕ್ಕೂ ಅಧಿಕ ಹಣ ಸಂಗ್ರಹವಾಗಿರುವುದು ತಿಳಿದುಬಂದಿದೆ. ಬಳಿಕ ಸ್ಥಳೀಯ ಮುಖಂಡರು ಮಾತುಕತೆ ನಡೆಸಿ, ಆ ಹಣವನ್ನು ಮೃತರ ಸಂಬಂಧಿಕರಿಗೆ ಹಸ್ತಾಂತರಿಸಿದ್ದಾರೆ.

ವೃದ್ಧೆ ಜೀವಂತವಾಗಿದ್ದಾಗ ಯಾರೊಬ್ಬರೂ ಆಕೆಯನ್ನು ನೋಡಿಕೊಳ್ಳಲಿಲ್ಲ, ಊಟಕ್ಕೂ ಗತಿಯಿಲ್ಲದೆ ಭಿಕ್ಷೆ ಬೇಡಿ ಬದುಕಿದ್ದರು. ಆದರೆ ಸಾವಿನ ನಂತರ ಆಕೆ ಕೂಡಿಟ್ಟಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಸಂಬಂಧಿಕರು ಹಂಚಿಕೊಂಡಿದ್ದಾರೆ ಎಂದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ಮತ್ತು ಅಸಮಾಧಾನ ವ್ಯಕ್ತವಾಗಿದೆ. ಈ ಘಟನೆ ಮಂಡ್ಯ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.