₹30 ಸಾವಿರ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಅರಣ್ಯ ಇಲಾಖೆ ಅಧಿಕಾರಿ!
ವೀರಮಾರ್ಗ ನ್ಯೂಸ್ : ರಾಮನಗರ ವಲಯದ ಡಿಆರ್ಎಫ್ಒ ರಾಜಶೇಖರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮರ ಸಾಗಾಣಿಕೆಗೆ ಪರ್ಮಿಟ್ ನೀಡಲು ಸಂತೋಷ್ ಕುಮಾರ್ ಎಂಬುವವರಿಂದ ₹30 ಸಾವಿರಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಕೇಳಿಬಂದಿದೆ.
ಖಾಸಗಿ ಹೋಟೆಲ್ನಲ್ಲಿ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ರಾಜಶೇಖರ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಎಸ್ಪಿ ಸ್ನೇಹಾ ಹಾಗೂ ಇನ್ಸ್ಪೆಕ್ಟರ್ ಸಂದೀಪ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ.
ವರದಿ: ಚನ್ನೇಶ್ ಕೆ ಎಂ
ಬೆಂಗಳೂರು.