ಗದಗ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ-೨೦೨೫

ಗದಗ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ-೨೦೨೫
ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ
ವೀರಮಾರ್ಗ ನ್ಯೂಸ್ ಗದಗ :
ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ, ಗದಗ ಇವರ ಸಂಯುಕ್ತಾಶ್ರಯದಲ್ಲಿ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಪ್ರಯುಕ್ತ ೨೦೨೩-೨೪, ೨೦೨೪-೨೫, ೨೦೨೫-೨೬ ನೇ ಸಾಲಿನ ಗದಗ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ -೨೦೨೫ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ನಗರದ ಭಾರತ ರತ್ನ ಪಂಡಿತ ಭೀಮಸೇನ ಜೋಶಿ ರಂಗ ಮಂದಿರದಲ್ಲಿ ಏಪ್ರಿಲ್ ೨೯ ರಂದು ಬೆಳಿಗ್ಗೆ ೧೧ ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸುವರು.
ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್. ಕೆ. ಪಾಟೀಲ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ ಸಂಸದರಾದ ಬಸವರಾಜ ಬೊಮ್ಮಾಯಿ ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್, ಕರ್ನಾಟಕ ಖನಿಜ ಅಬಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ.ಎಸ್. ಪಾಟೀಲ, ಸಂಸದರುಗಳಾದ ಪಿ.ಸಿ.ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ್, ನರಗುಂದ ಶಾಸಕರಾದ ಸಿ.ಸಿ.ಪಾಟೀಲ, ಶಿರಹಟ್ಟಿ ಶಾಸಕರಾದ ಡಾ. ಚಂದ್ರು ಲಮಾಣಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಕಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಬಿ. ಅಸೂಟಿ ಅವರುಗಳು ಆಗಮಿಸುವರು.
ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್. ನೇಮಗೌಡ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷರು ಹಾಗೂ ರಾಜ್ಯ ಹಿರಿಯ ಉಪಾಧ್ಯಕ್ಷರಾದ ಡಾ.ರವಿ ಎಲ್ ಗುಂಜೀಕರ್ ಸರ್ವರಿಗೂ ಸ್ವಾಗತ ಕೋರಿದ್ದಾರೆ.