ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆಯೊಡ್ಡಿದ ಆರೋಪ
ವೀರಮಾರ್ಗ ನ್ಯೂಸ್ : ಕೊಡಗು ಜಿಲ್ಲಾ : ಕಾಫಿ ಏಲಕ್ಕಿ ಗೇ ಹೆಸರಾದ ಜಿಲ್ಲಾ : ಅಲ್ಲೊಂದು ಕಾಮಕನಟ್ಟಹಾಸ : ಅಸ್ಸಾಂ ಮೂಲದ ಕಾರ್ಮಿಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿ ಕೊಲೆ ಬೆದರಿಕೆ ಒಡ್ಡಿದ ಆರೋಪದಡಿಯಲ್ಲಿ ಅಸ್ಸಾಂ ಮೂಲದ ಕಾರ್ಮಿಕನೋರ್ವ ಪೊಲೀಸರ ಅತಿಥಿಯಾಗಿದ್ದಾನೆ. ಪರಾರಿ ಆಗುತ್ತಿದ್ದ ಈತನನ್ನು ಗ್ರಾಮಸ್ಥರೆ ಅಟ್ಟಾಡಿಸಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸೋಮವಾರಪೇಟೆ ಸಮೀಪದ ಕಾರೆಕೊಪ್ಪದಲ್ಲಿ ಈ ಘಟನೆ ನಡೆದಿದೆ.

ಇಂದು ಬೆಳಿಗ್ಗೆ 8.30 ರ ಸಮಯದಲ್ಲಿ ಕಾರೆಕೊಪ್ಪದ ಮಹಿಳೆಯೊಬ್ಬರು ತೋಟದಲ್ಲಿ ಕೆಲಸಕ್ಕೆಂದು ಹೊರಟುಬಂದವರು ಇತರೆ ಕಾರ್ಮಿಕರ ಬರುವಿಕೆಯನ್ನು ನಿರೀಕ್ಷಿಸುತ್ತಾ ರಸ್ತೆ ಬದಿಯಲ್ಲಿ ನಿಂತಿದ್ದರು. ಈ ಸಂದರ್ಭ ಅಪರಿಚಿತ ಪುರುಷನೋರ್ವ ಒಂಟಿಯಾಗಿದ್ದ ಈ ಮಹಿಳೆಯ ಮೇಲೆ ಎರಗಿ ಬಾಯಿಗೆ ಬಟ್ಟೆ ತುರುಕಿ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ್ದಾನೆ ಅಲ್ಲದೇ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಮಹಿಳೆ ಜೋರಾಗಿ ಬೊಬ್ಬಿಡುತ್ತಿದ್ದಾಗ ಸುತ್ತಮುತ್ತಲಿನವರು ಮಹಿಳೆಯ ರಕ್ಷಣೆಗೆ ಧಾವಿಸಿ ಬಂದಿದ್ದಾರೆ. ಇದರಿಂದ ಮಹಿಳೆಯನ್ನು ಬಿಟ್ಟು ಓಡತೊಡಗಿದ ಆರೋಪಿಯನ್ನು ಬೆನ್ನಟ್ಟಿ ಹಿಡಿದು ಸೋಮವಾರಪೇಟೆ ಪೊಲೀಸ್ ಠಾಣೆಗೆ ವಿಷಯ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರಿಗೆ ಈತನನ್ನು ಒಪ್ಪಿಸಲಾಗಿದೆ. ಸಂತ್ರಸ್ತೆ ಮಹಿಳೆ ದೂರು ನೀಡಿದ ಮೇರೆಗೆ ವಿಚಾರಣೆ ಮುಂದುವರೆದಿದೆ. ಆರೋಪಿಯ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
