ಕಾಂಗ್ರೆಸ್ ವಿರೋಧಿ ಅಲೆ NDA ಮೈತ್ರಿಗೆ ಗೆಲುವು…

ಎನ್ ಡಿಎ ಕಾರ್ಯಕರ್ತರ ಸಂಘಟಿತ ಪ್ರಯತ್ನ ಪಶ್ಚಿಮ ಪದವೀಧರರ ಕ್ಷೇತ್ರದ
ಅಭ್ಯರ್ಥಿ ಎಸ್ ವಿ ಸಂಕನೂರ ಗೆಲುವು : ಮಂಜುನಾಥ ಗೌಡಶಿವಣ್ಣನವರ

ಕಾಂಗ್ರೆಸ್ ವಿರೋಧಿ ಅಲೆ ಎನ್ಡಿಎ ಮೈತ್ರಿಗೆ ಗೆಲುವು

ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ಎಸ್ ವಿ ಸಂಕನೂರ ಗೆಲುವು ಎನ್ಡಿಎ ಕಾರ್ಯಕರ್ತರ ಮುಖಂಡರ ಸಂಘಟಿತ ಹೋರಾಟದ ಗೆಲುವಾಗಿದೆ ಈ ಚುನಾವಣೆ ಆಡಳಿತ ಪಕ್ಷಕ್ಕೆ ಎಚ್ಚರಿಕೆ ಗಂಟೆಯಾಗಿದ್ದು ಮುಂದಿನ ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕೂಡ ಎನ್ ಡಿಎ ಮೈತ್ರಿಕೂಟ ಜಯಭೇರಿ ಬಾರಿಸಲಿದೆ ಎಂದು ಜೆಡಿಎಸ್ ಪಕ್ಷದ ಹಾವೇರಿ ಜಿಲ್ಲಾಧ್ಯಕ್ಷರಾದ ಮಂಜುನಾಥ್ ಗೌಡಶಿವಣ್ಣನವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಂಕನೂರ ಗೆಲುವಿಗೆ ಅಭಿನಂದನೆ ಸಲ್ಲಿಸಿ ಪತ್ರಿಕಾ ಹೇಳಿಕೆ ನೀಡಿರುವ ಅವರು
ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ
ಆಡಳಿತಾರೂಢ ಕಾಂಗ್ರೆಸ್ ಪಕ್ಷವು ನಾಲ್ಕೂ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೂ ಒಂದೇ ಒಂದು ಸ್ಥಾನವನ್ನು ಗೆಲ್ಲಲಾಗದೆ ತೀವ್ರ ಮುಖಭಂಗ ಅನುಭವಿಸಿದೆ ಬಿಜೆಪಿ-ಜೆಡಿಎಸ್‌ ಮೈತ್ರಿಯ ಎನ್‌ಡಿಎ ದಿಗ್ವಿಜಯ ಸಾಧಿಸಿದೆ.


ಚುನಾವಣಾ ಸೋಲಿಗೆ ಮತ ಪಟ್ಟಿ ಪರಿಷ್ಕರಣೆ, ಇವಿಎಂ ದೋಷ ಎಂದೆಲ್ಲ ಕಾರಣ ನೀಡುತ್ತಿದ್ದ ಕಾರಣ ನೀಡಿ ಜನರ ನಡುವೆ ಗೊಂದಲ ಸೃಷ್ಟಿಸುತ್ತಿರುವ ಕಾಂಗ್ರೆಸ್ ಪಕ್ಷ ಈಗ ಬ್ಯಾಲೆಟ್‌ ಪೇಪರ್‌ ಚುನಾವಣೆಯಲ್ಲೂ ಸೋತಿರುವುದು ಕಾಂಗ್ರೆಸ್ ನಾಯಕರು ಇದೀಗ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ ಎಂದು ಕಿವಿಮಾತು ಹೇಳಿದ್ದಾರೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಎ.ಪಿ. ರಂಗನಾಥ್ , ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಶಶೀಲ್ ಜಿ. ನಮೋಶಿ ,ಆಗ್ನೇಯ ಪದವೀಧರ ಕ್ಷೇತ್ರದಿಂದ ಬಿಜೆಪಿಯ ಕೆ.ಎಂ. ಸುರೇಶ್ ಹಾಗೂ ಪಶ್ಚಿಮ ಪದವೀಧರ ಕ್ಷೇತ್ರದಿಂದ ಬಿಜೆಪಿಯ ಎಸ್‌ ವಿ ಸಂಕನೂರ ಅವರ ಅಭೂತಪೂರ್ವ ಗೆಲುವು ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವಿನ ತಳಮಟ್ಟದ ಸಮನ್ವಯಕ್ಕೆ ದಿಕ್ಸೂಚಿಯಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಪ್ರಜ್ಞಾವಂತ ಶಿಕ್ಷಕರು ಮತ್ತು ಪದವೀಧರರು ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ತಿರಸ್ಕರಿಸಿದ್ದು ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವುದರ ಸ್ಪಷ್ಟ ಸಂಕೇತವಿದು ಎಂದು ವಿಶ್ವಾಸ ವ್ಯಕ್ತಪಡಿಸಿರುವ ಮಂಜುನಾಥ ಗೌಡಶಿವಣ್ಣನವರ ಎನ್ ಡಿಎ ಮೈತ್ರಿಕೂಟ ಅಭ್ಯರ್ಥಿಗಳ ಗೆಲುವಿಗೆ ಅಭಿನಂದನೆ ತಿಳಿಸಿದ್ದಾರೆ .