ಕಾಂಗ್ರೆಸ್ ಭ್ರಷ್ಟಾಚಾರಕ್ಕೆ ರಾಯರೆಡ್ಡಿ ಸರ್ಟಿಫಿಕೇಟ್ ನೀಡಿದ್ದಾರೆ : ಅಶೋಕ್
ವೀರಮಾರ್ಗ ನ್ಯೂಸ್ ಬೆಂಗಳೂರು : ಗ್ಯಾರಂಟಿಗಳಿಂದ ಸರ್ಕಾರ ದಿವಾಳಿಯಾಗಿದೆ ಎಂದು ಒಪ್ಪಿಕೊಂಡಿದ್ದ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ಈಗ ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ ೧ ಎಂದು ಒಪ್ಪಿಕೊಳ್ಳುವ ಮೂಲಕ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಸರ್ಟಿಫಿಕೇಟ್ ನೀಡಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಆಶೋಕ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸರ್ಕಾರದ ವಿರುದ್ಧ ಪೋಸ್ಟ್ ಮಾಡಿರುವ ಅವರು, ವಿಜ್ಞಾನ, ತಂತ್ರಜ್ಞಾನ, ಐಟಿ-ಬಿಟಿ, ಸ್ಟಾರ್ಟ್ ಅಪ್, ನಾವೀನ್ಯತೆಗಳಲ್ಲಿ ನಂಬರ್ ೧ ಆಗಿದ್ದ ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರದಲ್ಲಿ ನಂಬರ್ ೧ ಆಗಿರುವುದು ಕನ್ನಡಿಗರ ದುರಂತ ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ಭ್ರಷ್ಟಾಚಾರಕ್ಕೆ ರಾಯರೆಡ್ಡಿ ಸರ್ಟಿಫಿಕೇಟ್ ನೀಡಿದ್ದಾರೆ : ಅಶೋಕ್
