
ಮುಂದಿನ ವರ್ಷದಿಂದ ರಾಜ್ಯದಲ್ಲಿ ಹೆಚ್ಚುವರಿ ಅದಾಯದ ಬಜೆಟ್ ಮಂಡನೆ : ಸಿಎಂ ಸಿದ್ದರಾಮಯ್ಯ ಭರವಸೆ
ವೀರಮಾರ್ಗ ನ್ಯೂಸ್ : ಬೆಂಗಳೂರು : ಮುಂದಿನ ವರ್ಷದಿಂದ ರಾಜ್ಯದಲ್ಲಿ ಹೆಚ್ಚುವರಿ ಅದಾಯದ (ರೆನ್ ಸರ್ ಪಾಸ್) ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ರಾಜ್ಯದ ಸಾಲದ ಕುರಿತು ಆರೋಪ ಪ್ರತ್ಯಾರೋಪಗಳು ಮಾತಿನ ಚಕಮಕಿ ನಡೆಯಿತು.ವಿರೋಧಪಕ್ಷದ ನಾಯಕ ಆರ್.ಅಶೋಕ್, 4.09 ಲಕ್ಷ ಕೋಟಿ ಗಾತ್ರದ ಬಜೆಟ್‌ನಲ್ಲಿ 3.11 ಲಕ್ಷ ಕೋಟಿ ರೂ. ರಾಜಸ್ವ ವೆಚ್ಚವನ್ನು ನಿಗದಿ ಮಾಡಲಾಗಿದೆ. ಇದು ಶೇ.76 ರಷ್ಟಿದ್ದರೆ ಬಂಡವಾಳ ವೆಚ್ಚಕ್ಕೆ ಕೇವಲ 17.4 ರಷ್ಟು ಮೀಸಲಿಡಲಾಗಿದೆ. 11.36…