ವೀರ ಮಾರ್ಗ

10 ಸಾವಿರ ಲಂಚ : ಬೆಸ್ಕಾಂ ಸಹಾಯ ಇಂಜನೀಯರ್ ಲೋಕಾ ಬಲೆಗೆ

ಸಂತೇಬೆನ್ನೂರು : ರೈತರ ಜಮೀನೊಂದರಲ್ಲಿ ವಿದ್ಯುತ್ ಪರಿವರ್ತಕ ಅಳವಡಿಸಲು 10,000 ಲಂಚ ಪಡೆಯುತ್ತಿದ್ದ ವೇಳೆ ಇಲ್ಲಿನ ಬೆಸ್ಕಾಂ ಕಚೇರಿಯ ಸಹಾಯಕ ಎಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಹಾಯಕ ಎಂಜಿನಿಯರ್ ಅರುಣ್ ಕುಮಾರ್ ವರ್ಷದ ಹಿಂದೆ ಕೆಟ್ಟುಹೋಗಿದ್ದ ವಿದ್ಯುತ್ ಪರಿವರ್ತಕ ಬದಲಾಯಿಸಲು ಮಲ್ಲಾಪುರದ ರೈತ ಬಿ.ಎಂ. ಮಂಜುನಾಥ ಅವರ ಬಳಿ ಲಂಚದ ಬೇಡಿಕೆ ಇಟ್ಟಿದ್ದರು. ಈ ಕುರಿತು ಮಂಜುನಾಥ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರಿನನ್ವಯ ಲೋಕಾಯುಕ್ತ ಅಧಿಕಾರಿಗಳು ಶನಿವಾರ ಬೆಸ್ಕಾಂ ಕಚೇರಿಗೆ ಭೇಟಿ ನೀಡಿ ಲಂಚ ಪಡೆಯುತ್ತಿದ್ದ ಆರೋಪಿಯನ್ನು…

Read More

ಅಧಿಕಾರಿಗಳ ಮನವಿಗೆ ಸ್ಫಂದಿಸಿ ಹೋರಾಟವನ್ನು ಹಿಂಪಡೆದ ಹೊರಗುತ್ತಿಗೆ ಪೌರ ಕಾರ್ಮಿಕರು

ವೀರಮಾರ್ಗ ನ್ಯೂಸ್ ಶಿಗ್ಗಾವಿ : ತಾಲೂಕಿನ ಬಂಕಾಪುರ ಪಟ್ಟಣದ ಪುರಸಭೆ ಹೊರಗುತ್ತಿಗೆ ವಾಹನ ಚಾಲಕರು, ಲೋಡರ್ಸ ಹಾಗು ಕಾವಲು ಗಾರರು, ವೇತನ, ಇ.ಎಸ್.ಐ, ಪಿ.ಎಫ್ ಪಾವತಿಸುವಂತೆ ಒತ್ತಾಯಿಸಿ ಮೂರುದಿನಗಳಿಂದ ಮಾಡುತ್ತಿರುವ ಪ್ರತಿಬಟನೆಯನ್ನು ಶನಿವಾರ ಹಿಂಪಡೆದರು. ಕಳೆದ ಎರಡು ದಿನಗಳಿಂದ ಪಟ್ಟಣದಾತ್ಯಂತ ಸ್ವಚ್ಛತೆ, ಕಸ ವಿಲೇವಾರಿಯನ್ನು ಸ್ಥಗಿತಗೋಳಿಸಿ, ವೇತನಕ್ಕಾಗಿ ಹೋರಾಟದ ಹಾದಿ ಹಿಡಿದಿದ್ದ, ಹೋರಗುತ್ತಿಗೆ ವಾಹನ ಚಾಲಕರು, ಲೋಡರ್ಸ, ಕಾವಲುಗಾರರುಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ, ಸರ್ವ ಸದಸ್ಯರು ಹಾಗು ಪುರಸಭೆ ಅಧಿಕಾರಿಗಳ ಮನವಿ ಮೇರೆಗೆ ಪ್ರತಿಬಟನೆಯನ್ನು ಹಿಂಪಡೆದರು. ಪಟ್ಟಣದಾಧ್ಯಂತ ಹಿಂದು…

Read More

ಯುಗಾದಿ-ರಂಜಾನ ಹಬ್ಬದ ಉತ್ಸಾಹ ವಸ್ತುಗಳ ಖರೀದಿಗೆ ಮುಗಿಬಿದ್ದ ಜನ

ವೀರಮಾರ್ಗ ನ್ಯೂಸ್ ಶಿಗ್ಗಾವಿ : ತಾಲೂಕಿನಾಧ್ಯಂತ ಹಿಂದು, ಮುಸಲ್ಮಾನ ಬಾಂಧವರಲ್ಲಿ ಹಬ್ಬದ ಉತ್ಸಾಹ ಮನೆಮಾಡಿದ್ದು, ಭಾನುವಾರ ಆಚರಿಸುವ ಯುಗಾದಿ, ಸೋಮವಾರ ಆಚರಿಸುವ ರಂಜಾನ ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳನ್ನು ಮುಗಿಬಿದ್ದು ಖರೀದಿಸುತ್ತಿರುವುದು ಕಂಡುಬಂದಿತು. ಹಿಂದುಗಳಿಗೆ ಯುಗಾದಿ ಹೊಸವರ್ಷದ ಸಂಭ್ರಮವಾದರೆ, ಮುಸಲ್ಮಾನ ಬಾಂಧವರಿಗೆ ರಂಜಾನ ತಿಂಗಳು ಫವಿತ್ರ ತಿಂಳವಾಗಿ ಹೊರಹೊಮ್ಮಿದೆ. ಹಿಂದುಗಳು ಹೊಸವರ್ಷಕ್ಕೆ ಬೇಕಾದ ಹೊಸಬಟ್ಟೆ, ಪೂಜೆಗೆ ಬೇಕಾದ ಹಣ್ಣು, ಹೂ, ಕಿರಾಣಿ ಸಾಮಗ್ರಿ, ಅಲಂಕಾರಿವಸ್ತುಗಳು ಸೇರಿದಂತೆ ಇತರೇ ಸಾಮಗ್ರಿಗಳನ್ನು ಮಾರುಕಟ್ಟೆಗೆ ಲಗ್ಗೆಯಿಟ್ಟು ಖರೀದಿಯಲ್ಲಿ ತೋಡಗಿದರೇ, ಮುಸಲ್ಮಾನ ಬಾಂಧವರು…

Read More

ಧರ್ಮ ದೀಪದ ಬೆಳಕಿನಿಂದ ಅಜ್ಞಾನ ದೂರ : ರಂಭಾಪುರಿಶ್ರೀ

ವೀರಮಾರ್ಗ ನ್ಯೂಸ್ ಹುಬ್ಬಳ್ಳಿ : ಮನುಷ್ಯ ಯಾವಾಗಲೂ ಆಶಾವಾದಿಯಾಗಿ ಬದುಕಬೇಕಲ್ಲದೇ ನಿರಾಶಾವಾದಿಗಳಾಗಬಾರದು. ಜೀವನದಲ್ಲಿ ಭರವಸೆ ಎಂಬ ದೀಪ ಎಂದಿಗೂ ಆರಬಾರದು. ಧರ್ಮ ದೀಪದ ಬೆಳಕಿನಿಂದ ಮನುಷ್ಯನ ಅಜ್ಞಾನ ದೂರವಾಗುತ್ತದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಶನಿವಾರ ತಾಲೂಕಿನ ತಿರುಮಲಕೊಪ್ಪ ಗ್ರಾಮ ವ್ಯಾಪ್ತಿಯಲ್ಲಿ ಬರುವ ಶ್ರೀ ಜಗದ್ಗುರು ರೇಣುಕ ಧರ್ಮ ನಿವಾಸದಲ್ಲಿ ಶ್ರೀ ಜಗದ್ಗುರು ಪಂಚಾಚಾರ್ಯ ಯುಗಮಾನೋತ್ಸವ ಹಾಗೂ ಶ್ರೀ ಜಗದ್ಗುರು ರೇಣುಕಾಚಾರ್ಯ ಮಹಾರಥೋತ್ಸವ ಅಂಗವಾಗಿ ಜರುಗಿದ ಇಷ್ಟಲಿಂಗ ಮಹಾಪೂಜಾ ಮತ್ತು ಧರ್ಮ…

Read More

ಲಕ್ಷ್ಮೇಶ್ವರ ಪುರಸಭೆ 2025-26ನೇ ಸಾಲಿಗೆ 1.18 ರೋಟಿ ಉಳಿತಾಯ ಬಜೆಟ್

ಪಟ್ಟಣದ ಸ್ವಚ್ಛತೆಗೆ ಹೆಚ್ಚುವರಿ ಕಾರ್ಮಿಕರ ನೇಮಕ ಅಗತ್ಯ : ಶಾಸಕ ಲಮಾಣಿವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ಪಟ್ಟಣದ ಪುರಸಭೆಯಲ್ಲಿ ಶುಕ್ರವಾರ 2025-26ನೇ ಸಾಲಿನ 1.18 ಕೋಟಿ ರೂಪಾಯಿಗಳ ಉಳಿತಾಯದ ಬಜೆಟ್ ಮಂಡಿಸಲಾಯಿತು. ಮುಖ್ಯಾಧಿಕಾರಿ ಮಹೇಶ ಹಡಪದ ಅವರು ಶಾಸಕ ಚಂದ್ರು ಲಮಾಣಿ ಅವರ ಸಮ್ಮುಖದಲ್ಲಿ ಬಜೆಟ್ ಮಂಡಿಸಿ ಮಾತನಾಡಿದರು.“ಎಲ್ಲ ಮೂಲಗಳಿಂದ 724.45 ಕೋಟಿ ಆದಾಯ ನಿರೀಕ್ಷಿಸಲಾಗಿದೆ. ಅದರಲ್ಲಿ 723.27 ಕೋಟಿ ಖರ್ಚು ಮಾಡಲು ಉದ್ದೇಶಿಸಲಾಗಿದ್ದು, 1.18 ಕೋಟಿ ಉಳಿತಾಯವನ್ನು ಅಂದಾಜಿಸಲಾಗಿದೆ” ಎಂದು ತಿಳಿಸಿದರು.ಶಾಸಕ ಚಂದ್ರು ಲಮಾಣಿ ಮಾತನಾಡಿ,…

Read More

ಹೆಂಡತಿ ಶೀಲ ಶಂಕಿಸಿ ಕೊಲೆ, ಆರೋಪಿಗೆ ಜೀವಾವಧಿ ಶಿಕ್ಷೆ

ವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರು ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಲಕ್ಷ್ಮೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಹಿರೇಮಲ್ಲಾಪುರ ಗ್ರಾಮದ ವೀರಯ್ಯ ಶಿವಯ್ಯ ಹಿರೇಮಠ ಶಿಕ್ಷೆಗೆ ಒಳಗಾದ ಆರೋಪಿ ಆಗಿದ್ದಾನೆ. ಘಟನೆ ವಿವರ : 2004ರ ಡಿ.8ರಂದು ಆರೋಪಿ ತನ್ನ ಹೆಂಡತಿ ಈರಮ್ಮ ಹಿರೇಮಠ ಅವರ ಶೀಲದ ಬಗ್ಗೆ ಶಂಕೆ ವ್ಯಕ್ತಪಡಿಸಿ ಕೊಲೆ ಮಾಡಿದ್ದ. ಈ ಕುರಿತು ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ…

Read More

ವಿಧಾನ ಪರಿಷತ್ತಿನ ವಿವಿಧ ಹುದ್ದೆಗಳಿಗೆ ಏ.15ಕ್ಕೆ ಕನ್ನಡ ಪರೀಕ್ಷೆ

ವೀರಮಾರ್ಗ ನ್ಯೂಸ್ ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ವಿವಿಧ ಹುದ್ದೆಗಳ ಭರ್ತಿಗಾಗಿ ಕಡ್ಡಾಯ ಕನ್ನಡ ಪರೀಕ್ಷೆಯನ್ನು ಏ.15ರಂದು ನಡೆಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಹೇಳಿದ್ದಾರೆ.ಪರಿಷತ್ತಿನ ವಿವಿಧ ಹುದ್ದೆಗಳ ನೇಮಕಾತಿಗಾಗಿ ಮಾ.22ರಿಂದ 25ರವರೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿದ್ದು, ಅದಕ್ಕೆ ಹಾಜರಾದವರಿಗೆ ಮಾತ್ರ ಈ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ವಿನಾಯಿತಿ: 10ನೇ ತರಗತಿಯಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿತವರು, ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ…

Read More

ಡಿಕೆಶಿ, ವಿಜಯೇಂದ್ರ ಸಿಡಿ ರೂವಾರಿಗಳು : ಯತ್ನಾಳ್ ಬಾಂಬ್

ವೀರಮಾರ್ಗ ನ್ಯೂಸ್ ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ಅಂದಿನ ಬೃಹತ್ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಮೇಲೆ ಕೇಳಿ ಬಂದಿದ್ದ ಸಿ.ಡಿ ಪ್ರಕರಣದ ಹಿಂದೆ ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರುಗಳೇ ಪ್ರಮುಖ ರೂವಾರಿಗಳೆಂದು ಬಿಜೆಪಿಯಿಂದ ಉಚ್ಛಾಟಿತಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಟೋಟಕ ಆರೋಪ ಮಾಡಿದ್ದಾರೆ.ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದಲೇ ಆರು ವರ್ಷಗಳ ಕಾಲ ಉಚ್ಛಾಟನೆಗೊಂಡ ಬಳಿಕ ಮೊದಲ ಬಾರಿಗೆ ಸುದ್ದಿಗಾರರ ಜೊತೆ ಮಾತನಾಡಿದ…

Read More

ಮಾನವ ಸಂಪನ್ಮೂಲ ಒದಗಿಸಲು ತಾಂತ್ರಿಕ ಶಿಕ್ಷಣ ಇಲಾಖೆ ಬದ್ದ : ಡಾ. ಮುನಿರಾಜು

ವೀರಮಾರ್ಗ ನ್ಯೂಸ್ ಶಿಗ್ಗಾವಿ : ಉಧ್ಯಮ, ವ್ಯವಹಾರ, ಸಮೂದಾಯಕ್ಕೆ ಅಗತ್ಯವಾದ ಮಾನವ ಸಂಪನ್ಮೂಲ ಒದಗಿಸಲು ತಾಂತ್ರಿಕ ಶಿಕ್ಷಣ ಇಲಾಖೆ ಬದ್ದವಾಗಿದ್ದು, ವಿದ್ಯಾರ್ಥಿಗಳು ಶ್ರಮವಹಿಸಿ ಅಧ್ಯಯನ ಮಾಡಿ ಉನ್ನತ ಸ್ಥಾನ ಪಡೆಯುವಂತೆ ಹಾವೇರಿ ಇಂಜನೀಯರಿಂಗ ಕಾಲೇಜ್ ಪ್ರಾಚಾರ್ಯ ಡಾ. ಮುನಿರಾಜು ಎಂ. ಹೇಳಿದರು.ತಾಲೂಕಿನ ಗುಡ್ಡದಚನ್ನಾಪುರದ ಶ್ರೀ ಚನ್ನಕೇಶವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದ ಪ್ರೇರಣಾ ಮೆಂಟರ್ ಶಿಫ್ ಘಟಕಗಳ ಸಮಾರೋಪ ಸಭೆಯನ್ನುದ್ದೇಸಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶಿಸ್ತುಬದ್ದ ಜೀವನ ಶೈಲಿಯನ್ನು ಅಳವಡಿಸಿಕೊಂಡು ನಡೆದಾಗ ಉನ್ನತ ಹುದ್ದೆಯನ್ನು ಅಲಂಕರಿಸಬಹುದಾಗಿದೆ ಎಂದು…

Read More

ಹೀಟ್ ವೇವ್ ( ಶಾಖದ ಹೊಡೆತ) ದಿಂದ ಸಂರಕ್ಷಿಸಿಕೊಳ್ಳಲು ಮುಂಜಾಗ್ರತಾ ಕ್ರಮಗಳು

ವೀರಮಾರ್ಗ ನ್ಯೂಸ್ ಗದಗ: ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸರ‍್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಹೀಟ್‌ವೇವ್ (ಶಾಖದ ಹೊಡೆತ) ಸ್ಟ್ರೋಕ್‌ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಕೆಳಕಂಡ ಸಲಹೆಗಳನ್ನು ನೀಡಿದೆ. ಸಾರ್ವಜನಿಕರು ಬಿಸಿಲು ದಿನಗಳಲ್ಲಿ ಕೊಡೆ/ ಛತ್ರಿ ಬಳಸಿರಿ ಹಾಗೂ ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿ ಉಳಿಯಲು ಪ್ರಯತ್ನಿಸಬೇಕು. ತೆಳುವಾದ ಸಡಿಲವಾದ ಹತ್ತಿಯ ಉಡುಪುಗಳನ್ನು ಧರಿಸಿ,…

Read More