ಡಿಕೆಶಿ, ವಿಜಯೇಂದ್ರ ಸಿಡಿ ರೂವಾರಿಗಳು : ಯತ್ನಾಳ್ ಬಾಂಬ್
ವೀರಮಾರ್ಗ ನ್ಯೂಸ್ ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ಅಂದಿನ ಬೃಹತ್ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಮೇಲೆ ಕೇಳಿ ಬಂದಿದ್ದ ಸಿ.ಡಿ ಪ್ರಕರಣದ ಹಿಂದೆ ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರುಗಳೇ ಪ್ರಮುಖ ರೂವಾರಿಗಳೆಂದು ಬಿಜೆಪಿಯಿಂದ ಉಚ್ಛಾಟಿತಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಟೋಟಕ ಆರೋಪ ಮಾಡಿದ್ದಾರೆ.ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದಲೇ ಆರು ವರ್ಷಗಳ ಕಾಲ ಉಚ್ಛಾಟನೆಗೊಂಡ ಬಳಿಕ ಮೊದಲ ಬಾರಿಗೆ ಸುದ್ದಿಗಾರರ ಜೊತೆ ಮಾತನಾಡಿದ…