ಜೈಲಿನೊಳಗಿನ ಅಪರಾಧ ಹಾಗೂ ಅಕ್ರಮಗಳ ತಡೆಗೆ ಆಧುನಿಕ ತಂತ್ರಜ್ಞಾನ ಬಳಕೆ : ಪರಮೇಶ್ವರ್
ವೀರಮಾರ್ಗ ನ್ಯೂಸ್ : ಬೆಂಗಳೂರು: ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಜೈಲಿನೊಳಗಿನ ಅಪರಾಧ ಹಾಗೂ ಅಕ್ರಮಗಳ ತಡೆಗಟ್ಟಲು ಕಟ್ಟು ನಿಟ್ಟಿನ ಕ್ರಮ ವಹಿಸಿದ್ದೇವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ವಿಧಾನಪರಿಷತ್‌ನಲ್ಲಿ ಹೇಳಿದರು.ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಪ್ರತಾಪ್ ಸಿಂಹ ನಾಯಕ್ ಅವರ ಪ್ರಶ್ನೆಗೆ ಗೃಹ ಸಚಿವ ಪರಮೇಶ್ವರ್ ಅವರು, ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಜೈಲಿನಲ್ಲಿ ನಡೆಯುತ್ತಿರುವ ಆಕ್ರಮಗಳಿಗೆ ಕಡಿವಾಣ ಹಾಕಲಾಗಿದೆ. ಜೊತೆಗೆ ಹೈ ರೆಸ್ಯೂಲೂಷನ್ ಜಾಮರ್ ಗಳ ಅಳವಡಿಕೆ ಮಾಡಿ ಅಪರಾಧಿಗಳ ನಡುವಿನ ಸಂವಹನಕ್ಕೆ ಕಡಿತ…