
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ಜೊತೆಗೆ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಕೆಲಸ ಮಾಡುತ್ತಿದೆ. ಮಹಿಳೆಯರು ಮೌಡ್ಯಗಳಿಂದ ಹೊರ ಬಂದು ಪ್ರಗತಿಯ ದಿಕ್ಕಿನತ್ತ ಸಾಗಬೇಕು ಎಂದು ಸಮಾಜ ಸೇವಕ, ಜಿಲ್ಲಾ ಜನ ಜಾಗೃತಿ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ ಹೇಳಿದರು
ಅವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಆಯೋಜಿಸಿದ್ದ ಮಹಿಳಾ ವಿಚಾರಗೋಷ್ಠಿ ಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.ಗ್ರಾಮಗಳ ಸಮಗ್ರವಾದ ಅಭಿವೃದ್ಧಿಯಲ್ಲಿ ದೇಶದ ಪ್ರಗತಿ ನಿಂತಿದೆ ಎಂಬ ಸತ್ಯ ಅರಿತಿರುವ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಗ್ರಾಮಭಿವೃದ್ಧಿ ಯೋಜನೆಯ ಮೂಲಕ ಒಂದು ಸರ್ಕಾರವು ಮಾಡಲಾಗದ ಜನಪರವಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ ಬಡವರ ಪಾಲಿನ ಕಾಮಧೇನು ವಾಗಿದ್ದಾರೆ. ಮಹಿಳಾ ಸಬಲೀಕರಣಕ್ಕಾಗಿ ಬ್ಯಾoಕುಗಳ ಮೂಲಕ ಸಾಲ ಸೌಲಭ್ಯವನ್ನು ಕೊಡಿಸಿ ಗುಡಿ ಕೈಗಾರಿಕೆಗಳ ಸ್ಥಾಪನೆಗೆ…