ತಪೋವನ ಆಯುರ್ವೇದ ವೈದ್ಯಕೀಯ ಕಾಲೇಜಿನ ಘಟಿಕೋತ್ಸವದಲ್ಲಿ.
ವೀರಮಾರ್ಗ ನ್ಯೂಸ್ : ದಾವಣಗೆರೆ ಜಿಲ್ಲಾ : ತಪೋವನ ಆಯುರ್ವೇದ ವೈದ್ಯಕೀಯ ಕಾಲೇಜಿನ ಘಟಿಕೋತ್ಸವದಲ್ಲಿ ರಾಜ್ಯಪಾಲರ ಭಾಷಣದ ಸಾರಾಂಶ. ಕರ್ನಾಟಕ ರಾಜ್ಯಪಾಲರು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಗಣ್ಯರನ್ನು ಉದ್ದೇಶಿಸಿ ಮಾತನಾಡುತ್ತಾ, ಆಯುರ್ವೇದ, ಯೋಗ ಮತ್ತು ಪ್ರಕೃತಿ ಚಿಕಿತ್ಸೆಯ ಮಹತ್ವವನ್ನು ಗಮನದಲ್ಲಿಟ್ಟುಕೊಂಡು ಸ್ಥಾಪಿಸಲಾದ ತಪೋವನ ಸಂಸ್ಥೆಯ ಕಾರ್ಯವನ್ನು ಶ್ಲಾಘಿಸಿದರು.ಘಟಿಕೋತ್ಸವದಲ್ಲಿ ಪದವಿ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಅವರು, ಅವರ ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಸಿದರು. ವಿದ್ಯಾರ್ಥಿಗಳ ಈ ಸಾಧನೆಯ ಹಿಂದೆ ಅವರ ಕಠಿಣ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ…