AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು…
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು.. ವೀರಮಾರ್ಗ ನ್ಯೂಸ್ : ಬೆಂಗಳೂರು : ಉಸಿರಾಟ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ವರದಿಯಾಗಿದೆ. ಮಂಗಳವಾರ ಬೆಳಗ್ಗೆ ಎಂದಿನಂತೆಯೇ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರು, ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಭಾರಿ ಪ್ರವಾಹ ಮತ್ತು ಬೆಳೆ ಹಾನಿ ಬಗ್ಗೆ ಮಾತನಾಡಿದ್ದರು. ಅಲ್ಲದೆ, ಕಲ್ಯಾಣ ಕರ್ನಾಟಕದಲ್ಲಿ ಉಂಟಾಗಿರುವ ಪ್ರವಾಹ ಮತ್ತು ಬೆಳೆ ಹಾನಿಗೆ ಪರಿಹಾರ…