
ವಿಧಾನ ಪರಿಷತ್ತಿನ ವಿವಿಧ ಹುದ್ದೆಗಳಿಗೆ ಏ.15ಕ್ಕೆ ಕನ್ನಡ ಪರೀಕ್ಷೆ
ವೀರಮಾರ್ಗ ನ್ಯೂಸ್ ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ವಿವಿಧ ಹುದ್ದೆಗಳ ಭರ್ತಿಗಾಗಿ ಕಡ್ಡಾಯ ಕನ್ನಡ ಪರೀಕ್ಷೆಯನ್ನು ಏ.15ರಂದು ನಡೆಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಹೇಳಿದ್ದಾರೆ.ಪರಿಷತ್ತಿನ ವಿವಿಧ ಹುದ್ದೆಗಳ ನೇಮಕಾತಿಗಾಗಿ ಮಾ.22ರಿಂದ 25ರವರೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿದ್ದು, ಅದಕ್ಕೆ ಹಾಜರಾದವರಿಗೆ ಮಾತ್ರ ಈ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ವಿನಾಯಿತಿ: 10ನೇ ತರಗತಿಯಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿತವರು, ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ…