
ಪೊಲೀಸ್ ಠಾಣೆಗೆ ಬೆಂಕಿ : 23 ಆರೋಪಿಗಳಿಗೆ ಶಿಕ್ಷೆ ಪ್ರಕಟ…
ನ್ಯಾಯಕ್ಕೆ ಜಯ ಸಿಕ್ಕಿದೆ ಎಂದ ಅಧಿಕಾರಿಗಳು,,,! ವೀರಮಾರ್ಗ ನ್ಯೂಸ್ : ಗದಗ : ಲಕ್ಷ್ಮೀಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣದ 23 ಮಂದಿ ಆರೋಪಿಗಳಿಗೆ ಗದಗ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಶಿಕ್ಷೆ ಪ್ರಕಟಿಸಿದೆ. 2017 ಫೆ.5ರಂದು ಲಕ್ಷ್ಮೀಶ್ವರ ಪೊಲೀಸ್ ಠಾಣೆಯಲ್ಲಿ ನಡೆದಿತ್ತು. ಅಕ್ರಮ ಮರಳು ಸಾಗಿಸುವ ವಾಹನ ತಡೆದು ಚಾಲಕ ಶಿವಪ್ಪ ಡೋಣಿ ಎಂಬಾತನಿಗೆ ಪೊಲೀಸರು ಹಿಗ್ಗಾಮುಗ್ಗಾ ಥಳಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಶಿವಪ್ಪ, ಲಕ್ಷ್ಮೀಶ್ವರ ತಾಲೂಕಿನ ಬಟ್ಟೂರು ಗ್ರಾಮದ ನಿವಾಸಿಯಾಗಿದ್ದ. ಶಿವಪ್ಪನಿಗೆ…