
ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ವಿಧೇಯಕ ವಿಧಾನಸಭೆಯಲ್ಲಿ ಮಂಡನೆ
ವೀರಮಾರ್ಗ ನ್ಯೂಸ್ : ಬೆಂಗಳೂರು : ಗ್ರಾಮೀಣ ಭಾಗದಲ್ಲಿ ಕಟ್ಟಡ ನಿರ್ಮಾಣದ ವೇಳೆ ಗ್ರಾಮ ಪಂಚಾಯಿತಿ ಅಥವಾ ಯೋಜನಾ ಪ್ರಾಧಿಕಾರಗಳ ಮೂಲಕ ಲೇಔಟ್ ಪ್ಲಾನ್‌ಗೆ ಪೂರ್ವಾನುಮೋದನೆ ಪಡೆದುಕೊಳ್ಳಬೇಕು ಎಂಬ ನಿಯಮವನ್ನೊಳಗೊಂಡ ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ವಿಧೇಯಕವನ್ನು ವಿಧಾನಸಭೆಯಲ್ಲಿಂದು ಮಂಡಿಸಲಾಯಿತು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪರವಾಗಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ವಿಧೇಯಕವನ್ನು ಮಂಡಿಸಿದರು.ಕಟ್ಟಡ ನಿವೇಶನಗಳಿಗೆ ಹೊಸ ಖಾತೆ ಅಥವಾ ಪಿಐಡಿಯನ್ನು ನೀಡುವ ಮೊದಲು ಲೇಔಟ್ ಪ್ಲಾನ್‌ಗೆ…