
ಏಪ್ರಿಲ್ ನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದ ಚುನಾವಣೆ : ಯಾರಾಗಲಿದ್ದಾರೆ ಸಾರಥಿ..?
ಬೆಂಗಳೂರು : ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದ ಚುನಾವಣೆಗೆ ವೇದಿಕೆ ಸಿದ್ದಗೊಳ್ಳುತ್ತಿದ್ದು, ಏಪ್ರಿಲ್ ತಿಂಗಳಲ್ಲಿ ಬಿಜೆಪಿ ಸಾರಥಿ ಯಾರು? ಎನ್ನುವುದು ಸ್ಪಷ್ಟವಾಗಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಚುನಾವಣೆಯ ಬಳಿಕವೇ ರಾಜ್ಯ ಬಿಜೆಪಿ ಅಧ್ಯಕ್ಷರ ನೇಮಕಾತಿಗೆ ಚಾಲನೆ ದೊರೆಯಲಿದೆ.ಏಪ್ರಿಲ್ ಮೊದಲ ವಾರದಲ್ಲಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯುವ ಸಾಧ್ಯತೆಗಳಿವೆ. ಇದಾದ ಬಳಿಕ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಅಥವಾ ಆವಿರೋಧ ಆಯ್ಕೆ ನಡೆಯುವ ಸಾಧ್ಯತೆ ಗೋಚರಿಸಿದೆ. ರಾಜ್ಯ ಬಿಜೆಪಿ ಅಧ್ಯಕ್ಷರ ಚುನಾವಣೆ ನಡೆಸಲು ಅನುಕೂಲವಾಗುವಂತೆ ಜಿಲ್ಲಾ ಬಿಜೆಪಿ…