
ಲೋಕಾಯುಕ್ತರು ಹಾಗೂ ಉಪ ಲೋಕಾಯುಕ್ತರು ಆಸ್ತಿ ವಿವರ ಘೋಷಿಸಲು ಆಗ್ರಹ
ವೀರಮಾರ್ಗ ನ್ಯೂಸ್ : ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ದಿನಕ್ಕೊಂದು ಹಗರಣ ಬಹಿರಂಗವಾಗುತ್ತಿದೆ. ಜನರು ತಮ್ಮ ಮೂಲಭೂತ ಅವಶ್ಯಕತೆಗಳನ್ನು ಪಡೆದುಕೊಳ್ಳಲು ಕೂಡ ಲಂಚ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ರಾಜ್ಯದಲ್ಲಿ ಭ್ರಷ್ಟಾಚಾರವನ್ನು ನಿಗ್ರಹಿಸುವ ಬಲಿಷ್ಠವಾದ ವ್ಯವಸ್ಥೆ ಇಲ್ಲದಿರುವುದು ಕಾರಣವಾಗಿದೆ. ಭ್ರಷ್ಟಾಚಾರವನ್ನು ನಿಗ್ರಹಿಸಬೇಕಾದ ಹಾಗೂ ದುರಾಡಳಿತವನ್ನು ಸರಿದಾರಿಗೆ ತರಲೆಂದೇ ಇರುವ ಲೋಕಾಯುಕ್ತ ಸಂಸ್ಥೆಯು ತನ್ನ ಘನತೆ, ಗೌರವವನ್ನು ಹಾಗೂ ಜನರ ವಿಶ್ವಾಸವನ್ನು ಕಳೆದುಕೊಂಡಿರುವುದು. ಲೋಕಾಯುಕ್ತವು ವಿಶ್ವಾಸ ಕಳೆದುಕೊಂಡಿರುವುದರಿಂದ ಜನರು ಭ್ರಷ್ಟಾಚಾರ ಹಾಗೂ ದುರಾಡಳಿತದ ಬಗ್ಗೆ ದೂರು ನೀಡಲು ಹಿಂಜರಿಯುತ್ತಿದ್ದಾರೆ. ಲಂಚ…