ಅತ್ಯಾಚಾರಕ್ಕೊಳಗಾಗಿ 16 ವರ್ಷದ ಅಪ್ರಾಪ್ತ ಬಾಲಕಿ ಧರಿಸಿರುವ 28 ವಾರಗಳ ಗರ್ಭವನ್ನು ತೆಗೆಯಲು ವಾಣಿ ವಿಲಾಸ ಆಸ್ಪತ್ರೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ವೀರಮಾರ್ಗ ನ್ಯೂಸ್: ಬೆಂಗಳೂರು: ಅತ್ಯಾಚಾರಕ್ಕೊಳಗಾಗಿ 16 ವರ್ಷದ ಅಪ್ರಾಪ್ತ ಬಾಲಕಿ ಧರಿಸಿರುವ 28 ವಾರಗಳ ಗರ್ಭವನ್ನು ತೆಗೆಯಲು ವಾಣಿ ವಿಲಾಸ ಆಸ್ಪತ್ರೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಅಲ್ಲದೇ ಸಂತ್ರಸ್ತ ಬಾಲಕಿಯ ವೈದ್ಯಕೀಯ ಗರ್ಭಪಾತದ ವೆಚ್ಚವನ್ನು ಆಸ್ಪತ್ರೆ ಭರಿಸಬೇಕು ಎಂದೂ ಸೂಚಿಸಿದೆ. ಸಂತ್ರಸ್ತ ಬಾಲಕಿಯ ಪರವಾಗಿ ಯಲಹಂಕ ನಿವಾಸಿಯಾದ ಆಕೆಯ ತಾಯಿ ಸಲ್ಲಿಸಿರುವ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ. ಸಂತ್ರಸ್ತೆಯ ಜೀವಕ್ಕೆ ಹಾನಿಯಾಗದಂತೆ ಗರ್ಭಪಾತ ಮಾಡುವ ಸಂಬಂಧ…