ಹಾವೇರಿ : ಹಾಲು ಒಕ್ಕೂಟದ ಅಧ್ಯಕ್ಷರಾಗಿ ಪಾಟೀಲ ಅವಿರೋಧ ಆಯ್ಕೆ, ಉಪಾಧ್ಯಕ್ಷರಾಗಿ ಮಾವಿನತೋಪ ಆಯ್ಕೆ
ವೀರಮಾರ್ಗ ನ್ಯೂಸ್ : ಹಾವೇರಿ : ಹಾವೇರಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (ಹಾವೇಮುಲ್‌ದ ನೂತನ ಅಧ್ಯಕ್ಷರಾಗಿ ಮಂಜನಗೌಡ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ಉಜ್ಜನಗೌಡ ಮಾವಿನತೋಪು ಅವಿರೋಧವಾಗಿ ಆಯ್ಕೆಯಾದರು.ನಗರದ ಪಶು ಆಸ್ಪತ್ರೆ ಆವರಣದಲ್ಲಿನ ಹಾಲು ಒಕ್ಕೂಟದ ಕಚೇರಿಯಲ್ಲಿ ಸೋಮವಾರ ಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ಹಮ್ಮಿಕೊಳ್ಳಲಾಗಿತ್ತು. ಸದಸ್ಯರೆಲ್ಲ ಒಂದಾಗಿ ಚುನಾವಣೆ ನಡೆಸದೇ ಅವಿರೋಧವಾಗಿ ಆಯ್ಕೆ ಮಾಡಿದರು.ಮಾ.೨ರಂದು ಒಕ್ಕೂಟದ ನಿರ್ದೇಶಕರ ಸ್ನಾನಗಳಿಗೆ ಚುನಾವಣೆ ನಡೆಸಲಾಗಿತ್ತು, ಸೋಮವಾರ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ತಲಾ ಒಂದು ನಾಮಪತ್ರ ಮಾತ್ರ ಸಲ್ಲಿಕೆಯಾಗಿತ್ತು….