ದೇಶ ಮತ್ತು ಧರ್ಮ ಮನುಷ್ಯನ ಎರಡು ಕಣ್ಣು : ಡಾ. ವಿಜಯ ಸಂಕೇಶ್ವರ
ವೀರಮಾರ್ಗ ನ್ಯೂಸ್ : ಬಾಳೆಹೊನ್ನೂರು : ಭಾವೈಕ್ಯತೆ ಮತ್ತು ಆಧ್ಯಾತ್ಮ ಭಾರತದ ಉಸಿರು. ಸಾತ್ವಿಕ ತಾತ್ವಿಕ ಹಿತ ಚಿಂತನಗಳನ್ನು ಬೆಳೆಸುವುದರ ಮೂಲಕ ಭಾವೈಕ್ಯತೆಯ ಸೇತುವೆಯನ್ನು ಕಟ್ಟಿದ ಕೀರ್ತಿ ಶ್ರೀ ಜಗದ್ಗುರು ರೇಣುಕಾಚಾರ್ಯರಿಗೆ ಸಲ್ಲುತ್ತದೆ. ಶಾಂತಿ ನೆಮ್ಮದಿಯ ಬದುಕಿಗೆ ರೇಣುಕಾಚಾರ್ಯರು ಕೊಟ್ಟ ಕೊಡುಗೆ ಅಪಾರವಾದುದೆಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು ಬುಧವಾರ ಬೆಳಿಗ್ಗೆ ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವ ಸಂದರ್ಭದಲ್ಲಿ ಜರುಗಿದ…