ರಚನಾತ್ಮಕ ಕಾರ್ಯಗಳಿಂದ ಸಮಾಜ ಸಮೃದ್ಧ : ರಂಭಾಪುರಿಶ್ರೀ
ವೀರಮಾರ್ಗ ನ್ಯೂಜ್ ಆಳಂದ : ಮನುಷ್ಯ ಯಾವಾಗಲೂ ಸುಖಾಪೇಕ್ಷಿ. ಸುಖ ಶಾಂತಿ ಬದುಕಿಗೆ ಧರ್ಮ ಪರಿಪಾಲನೆ ಮುಖ್ಯ. ರಚನಾತ್ಮಕ ಮತ್ತು ಗುಣಾತ್ಮಕ ಸತ್ಕಾರ್ಯಗಳಿಂದ ಸಮಾಜ ಸದೃಢಗೊಳ್ಳುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಭಾನುವಾರ ತಾಲೂಕಿನ ಚಲಗೇರಾ ಗ್ರಾಮದಲ್ಲಿ ಶ್ರೀ ಜಗದ್ಗುರು ರಂಭಾಪುರೀಶ್ವರ ಸದನದ ಲೋಕಾರ್ಪಣೆ-ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಜಾತ್ರಾ ಮಹೋತ್ಸವದ ಅಂಗವಾಗಿ ಜರುಗಿದ ಜನ ಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.ಮನುಷ್ಯ ಜೀವನದಲ್ಲಿ ಧರ್ಮ ಅರ್ಥ ಕಾಮ…