Ino

ವೀರಮಾರ್ಗ ನ್ಯೂಸ್ : ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಶೂನ್ಯವೇಳೆಯಲ್ಲಿ ಮಾಡಿದ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ಏಕಾಏಕಿ ಬಂದ್ ಕರೆಯುವ ಅಗತ್ಯವಿರಲಿಲ್ಲ. ಈ ನಿರ್ಧಾರ ಸರಿಯಲ್ಲ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.
ಇದಕ್ಕೂ ಮುನ್ನ ಮಾತನಾಡದ ನಾರಾಯಣಸ್ವಾಮಿ ಅವರು, ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿದೆ. ಮಾ.22ರಂದು ಬಂದ್ ಕರೆ ನೀಡಲಾಗಿದೆ. ಇದರಿಂದ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಇಂತಹ ಗೊಂದಲದ ಪರಿಸ್ಥಿತಿಯನ್ನು ನಿವಾರಣೆ ಮಾಡಲು ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂಬುದನ್ನು ತಿಳಿಸಬೇಕೆಂದು ಆಗ್ರಹಿಸಿದರು.