ವೀರಮಾರ್ಗ ನ್ಯೂಸ್ : ಗದಗ ಜಿಲ್ಲಾ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ಪಕ್ಷದ ಬಲಿಷ್ಠ ಸಂಘಟನೆಗೆ ಕರೆ ನೀಡಿದ ಜಿಲ್ಲಾ ಸಂಘಟನಾ ಸಂಯೋಜಕ ಡಾ.ಮುರುಗೇಶ ನಿರಾಣಿ
ಭಾರತೀಯ ಜನತಾ ಪಾರ್ಟಿ ಗದಗ ಜಿಲ್ಲಾ ಘಟಕದ ವತಿಯಿಂದ ಗದಗದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿಂದು ಆಯೋಜಿಸಲಾಗಿದ್ದ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಮಾಜಿ ಸಚಿವರು ಹಾಗೂ ರಾಜ್ಯ ಬಿಜೆಪಿಯ ಉಪಾಧ್ಯಕ್ಷರಾದ ಡಾ.ಮುರುಗೇಶ್ ಆರ್ ನಿರಾಣಿ ಅವರು ಭಾಗವಹಿಸಿ ಮಾತನಾಡಿದರು.
ಈ ಮಹತ್ವದ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ಜಿಲ್ಲಾ ಸಂಘಟನಾ ಸಂಯೋಜಕರಾಗಿ ಭಾಗವಹಿಸಿದ್ದ ನಿರಾಣಿ ಅವರು ಮುಂಬರುವ ದಿನಗಳಲ್ಲಿ ಜಿಲ್ಲೆಯಾದ್ಯಂತ ಪಕ್ಷವನ್ನು ತಳಮಟ್ಟದಿಂದ ಮತ್ತಷ್ಟು ಸದೃಢಗೊಳಿಸುವ ಹಾಗೂ ಕಾರ್ಯಕರ್ತರನ್ನು ಸಕ್ರಿಯಗೊಳಿಸುವ ನಿಟ್ಟಿನಲ್ಲಿ ಮಹತ್ವದ ಸಂಘಟನಾತ್ಮಕ ಮಾರ್ಗದರ್ಶನ ನೀಡಿದರು ಜೊತೆಗೆ ಜಿಲ್ಲೆಯಲ್ಲಿ SIR ಅತ್ಯಂತ ಸಮರ್ಥವಾಗಿ ನಡೆಯಬೇಕು ಮತ್ತು ಇದನ್ನು ಯಶಸ್ವಿಗೊಳಿಸಲು ಎಲ್ಲಾ ಕಾರ್ಯಕರ್ತರು ಒಗ್ಗಟ್ಟಿನಿಂದ ಸಹಕಾರ ನೀಡಬೇಕು ಹಾಗೂ ಸಾರ್ವಜನಿಕರಿಗೆ ಈ ಬಗ್ಗೆ ಪೂರ್ಣ ಅರಿವು ಮೂಡಿಸಬೇಕು ಎಂದು ಕರೆ ನೀಡಿದರು.
ಈ ವೇಳೆ ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ, ಸಂಸದರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ, ಶಾಸಕರಾದ ಶ್ರೀ ಸಿ.ಸಿ. ಪಾಟೀಲ, ಡಾ.ಚಂದ್ರು ಲಮಾಣಿ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಎಸ್.ವಿ. ಸಂಕನೂರ, ಮಾಜಿ ಸಚಿವರು ಹಾಗೂ ಮಾಜಿ ಶಾಸಕರಾದ ಶ್ರೀ ಕಳಕಪ್ಪ ಜಿ. ಬಂಡಿ, ಬಿಜೆಪಿ ಗದಗ ಜಿಲ್ಲಾ ಅಧ್ಯಕ್ಷರಾದ ಶ್ರೀ ತೋಟಪ್ಪ ಕುರುಡಗಿ, ಬಿಜೆಪಿ ವಿಭಾಗ ಪ್ರಭಾರಿಗಳಾದ ಶ್ರೀ ಜಯತೀರ್ಥ ಕಟ್ಟಿ ಸೇರಿದಂತೆ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಪಕ್ಷದ ಪ್ರಮುಖರು, ಗಣ್ಯರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.
ಈ ಸಭೆಯಲ್ಲಿ ಪಕ್ಷದ ಮುಂದಿನ ರಾಜಕೀಯ ಕಾರ್ಯತಂತ್ರಗಳು ಮತ್ತು ಬಲವರ್ಧನೆಯ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು ಹಾಗೂ ಎಲ್ಲಾ ಹಿರಿಯ ನಾಯಕರು ಮತ್ತು ಜನಪ್ರತಿನಿಧಿಗಳು ಒಟ್ಟಾಗಿ ಪಕ್ಷದ ಜನಪರ ಯೋಜನೆಗಳನ್ನು ಜಿಲ್ಲೆಯ ಮನೆ ಮನೆಗೆ ತಲುಪಿಸಲು ಮತ್ತು ಗದಗ ಜಿಲ್ಲೆಯಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವ ಕುರಿತು ಸಂಕಲ್ಪ ಮಾಡಿದರು.