ಬೆಳಗಾವಿ : ಭೀಕರ ರಸ್ತೆ ಅಪಘಾತದಲ್ಲಿ ಪತಿಯ ಎದುರೇ ಪತ್ನಿ ಮೃತಪಟ್ಟ ಘಟನೆ ತಾಲೂಕಿನ ಹಿರೇಬಾಗೇವಾಡಿ ಸಮೀಪದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೂಡಲಗಿ ತಾಲೂಕಿನ ಸಂಗಣಕೇರಿಯ ವೈದ್ಯೆ ಡಾ.ಆಶಾ ಕೋಳಿ (32) ಮೃತ ದುರ್ದೈವಿ. ಆಶಾ ಪತಿ ಡಾ.ಭೀಮಪ್ಪ ಕೋಳಿ, ಚಾಲಕ ಮಹೇಶ ಖೋತ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.ಲಾರಿ ಹಿಂಬದಿಗೆ ರಭಸವಾಗಿ ಕಾರು ಡಿಕ್ಕಿಯಾದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಧಾರವಾಡದಿಂದ ಬೆಳಗಾವಿ ಕಡೆಗೆ ಬರುವಾಗ ಹಿರೇಬಾಗೇವಾಡಿ ಬಳಿ ದುರ್ಘಟನೆ ನಡೆದಿದ್ದು,ಗಾಯಾಳುಗಳನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಹಿರೇಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.