ಶಿಶು ಹೊಟ್ಟೆಯಲ್ಲಿ ಭ್ರೂಣ ಪತ್ತೆ : ಕೆಎಲ್‌ಇ ವೈದ್ಯರಿಂದ ಯಶಸ್ವಿ ಶಸ್ತ್ರಚಿಕಿತ್ಸೆ

ವೀರಮಾರ್ಗ ನ್ಯೂಸ್ : ಬೆಳಗಾವಿ ಜಿಲ್ಲಾ : ಆರು ಲಕ್ಷ ಗರ್ಭಿಣಿಯರ ಪೈಕಿ ಓರ್ವರಲ್ಲಿ ಕಂಡುಬರುವ ನವಜಾತ ಶಿಶುವಿನ ಹೊಟ್ಟೆಯಲ್ಲಿ ಬೆಳಿಯುತ್ತಿದ್ದ ಭ್ರೂಣವನ್ನು ಕೆಎಲ್‌ಇ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿಯಾಗಿ ಹೊರತಗೆದಿರುವ ಅಪರೂಪದ ಘಟನೆ ನಡೆದಿದೆ.ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ ಚಿಕ್ಕಮಕ್ಕಳ ಶಸ್ತ್ರಚಿಕಿತ್ಸಕರು ಹೆರಿಗೆಯಾಗಿದ್ದ ಮಹಿಳೆಯ ನವಜಾತ ಶಿಶುವಿನ ಹೊಟ್ಟೆಯಲ್ಲಿ ಇದ್ದ ಭ್ರೂಣವನ್ನು ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿಯಾಗಿ ಹೊರತಗೆದಿದ್ದಾರೆ.

ಮಹಾರಾಷ್ಟ್ರದ ಚಂದಗಡದ 7 ತಿಂಗಳ ಗರ್ಭಿಣಿ ಮಹಿಳೆಯ ಗರ್ಭ ತಪಾಸಣೆ ಮಾಡಿರುವ ಸಂದರ್ಭದಲ್ಲಿ ಭ್ರೂಣದೊಳಗೆ ಮತ್ತೊಂದು ಭ್ರೂಣ ಬೆಳೆಯುತ್ತಿರುವದು ಕಂಡುಬಂದಿದೆ. ಕೆಎಲ್‌ಇ ಆಸ್ಪತ್ರೆ ವೈದ್ಯರು ನಿರಂತರವಾಗಿ ನಿಗಾದಲ್ಲಿಟ್ಟು 37 ವಾರಗಳ ನಂತರ ಮಹಿಳೆಯು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತದನಂತರ ಶಿಶುವಿನ ಹೊಟ್ಟೆಯಲ್ಲಿ ಇದ್ದ ಇನ್ನೊಂದು ಭ್ರೂಣವನ್ನು ಯಶಸ್ವಿಯಾಗಿ ಹೊರತೆಗೆಯಲಾಗಿದೆ.ಚಿಕ್ಕಮಕ್ಕಳ ಶಸ್ತ್ರಚಿಕಿತ್ಸಕರಾದ ಡಾ. ಸ್ವಪ್ಪಿಲ ಪಟ್ಟಣಶೆಟ್ಟಿ ಮಾತನಾಡಿ.

ಅವಳಿ ಆಮ್ಮಿಯೋಟಿಕ್ ಚೀಲವು ಪ್ರಮುಖ ನಾಳಗಳಾದ ಐವಿಸಿ, ಬಲಬದಿಯ ಮೂತ್ರಪಿಂಡ ನಾಳ ಹಾಗೂ ಮಹಾಪಧಮನಿಯ ಮಧ್ಯದಲ್ಲಿ ಬೆಳೆಯುತ್ತಿತ್ತು. ಅತ್ಯಂತ ಕ್ಲಿಷ್ಟಕರವಾದ ಈ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಮಗುವನ್ನು ಪ್ರಾಣಾಪಾಯದಿಂದ ಪಾರು ಮಾಡುವದು ಅತ್ಯಂತ ಸವಾಲಿನ ಕೆಲಸವಾಗಿತ್ತು.

ಗರ್ಭಧಾರಣೆಯ ಪ್ರಥಮದಲ್ಲಿ ಕೆಲವು ವಾರ ಇನ್ನೊಂದು ಭ್ರೂಣವು ಸುತ್ತುವರೆದು ಅದು ಮರೆಯಾಗುತ್ತದೆ. ನಂತರ ಈ ರೀತಿಯಾಗಬಹುದು. ಆದರೆ ಅವಳಿಯ ರಕ್ತ ಪೂರೈಕೆಯನ್ನು ಅವಲಂಬಿಸಿ ಭ್ರೂಣದ ಗಾತ್ರ ಹೆಚ್ಚುತ್ತಲಿರುತ್ತದೆ. ಸುಮಾರು 6 ಲಕ್ಷ ಗರ್ಭಿಣಿ ಮಹಿಳೆಯರ ಪೈಕಿ ಒಬ್ಬರಲ್ಲಿ ಭ್ರೂಣದೊಳಗೆ ಮತ್ತೊಂದು ಭ್ರೂಣವು ಬೆಳೆಯುವದು ಕಂಡು ಬರುತ್ತದೆ.

ಆದರೆ ಇದಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ ಎಂದರು.ಶಸ್ತ್ರಚಿಕಿತ್ಸಕರಾದ ಡಾ. ಸ್ವಪ್ಟಿಲ್ ಪಟ್ಟಣಶೆಟ್ಟಿ ಅವರಿಗೆ ಡಾ. ಸಕ್ಷಮ, ಅರಿವಳಿಕೆ ತಜ್ಞವೈದ್ಯರಾದ ಡಾ. ರಾಜೇಶ್ ಮಾನೆ ಮತ್ತು ಡಾ. ಪ್ರಿಯಾಂಕಾ ಗಾಡ್ವಾ ಅವರಿಗೆಮಾನ ಮತ್ತು ಡಾ. ಪ್ರಿಯಾಂಕಾ ಗಾತ್ವಿ ಅವರಿಗೆ ಶಸ್ತ್ರಚಿಕಿತ್ಸೆಗೆ ಸಹಕರಿಸಿದರು. ನಂತರ ತೀವ್ರ ನಿಗಾ ಘಟಕದಲ್ಲಿ ಡಾ. ಮನೀಷಾ ಭಂಡನಕರ ಹಾಗೂ ಡಾ. ರಾಮ್ ಭಟ್ ಅವರು ಆರೈಕೆ ಮಾಡಿದರು. ಮಗು ಈಗ ಚೇತರಿಸಿಕೊಂಡಿದೆ. ಮಹಾರಾಷ್ಟ್ರದ ಮಹಾತ್ಮಾ ಜ್ಯೋತಿರಾವ್ ಫುಲೆ ಜನ ಆರೋಗ್ಯ ಯೋಜನೆಯಡಿ ಶಸ್ತ್ರಚಿಕಿತ್ಸೆಯನ್ನು ಸಂಪೂರ್ಣ ಉಚಿತವಾಗಿ ನೆರವೇರಿಸಲಾಗಿದೆ.ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರ ತಂಡವನ್ನು ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಹಾಗೂ ಆಡಳಿತ ಮಂಡಳಿ ಸದಸ್ಯರು, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಕರ್ನಲ್ ಎಂ ದಯಾನಂದ ಅಭಿನಂದಿಸಿದ್ದಾರೆ.

ವರದಿ : ಕಲ್ಲಪ್ಪ ಬೆಳಗಾವಿ.

Leave a Reply

Your email address will not be published. Required fields are marked *