ಕಲಬುರಗಿ: ಮಾ.11ರಂದು ಸಿಯುಕೆ 8ನೇ ಘಟಿಕೋತ್ಸವ
ವೀರಮಾರ್ಗ ನ್ಯೂಸ್ :
ಕಲಬುರಗಿ ಜ.9: ಇಲ್ಲಿನ ಕಡಗಂಚಿ ಸಮೀಪದ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ವಿವಿಧೋದ್ದೇಶ ಸಭಾ ಭವನದಲ್ಲಿ ಎಂಟನೇ ಘಟಿಕೋತ್ಸವ ಇದೇ ಮಾ.11ರಂದು ಬೆಳಗ್ಗೆ 9.30ಕ್ಕೆ ನಡೆಯಲಿದ್ದು, ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿ ಹಾಗೂ ಇಸ್ರೋ ಅಧ್ಯಕ್ಷ ವಿ.ನಾರಾಯಣನ್ ಘಟಿಕೋತ್ಸವ ಉದ್ಘಾಟಿಸಿ ಪ್ರಮುಖ ಭಾಷಣ ಮಾಡಲಿದ್ದಾರೆ ಎಂದು ವಿವಿ ಕುಲಪತಿ ಪೆÇ್ರ.ಬಟ್ಟು ಸತ್ಯನಾರಾಯಣ ತಿಳಿಸಿದರು.
ವಿಶ್ವವಿದ್ಯಾಲಯದ ಆಡಳಿತ ಭವನದ ಸಭಾಂಗಣದಲ್ಲಿ ಕರೆದಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸಿಯುಕೆ ಕುಲಾಧಿಪತಿ ವಿಜಯಕೇಶವ ಗೋಖಲೆ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಈ ಬಾರಿಯ ಘಟಿಕೋತ್ಸವದಲ್ಲಿ 197 ವಿದ್ಯಾರ್ಥಿಗಳು ಪದವಿ ಹಾಗೂ 627 ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ ಸ್ವೀಕರಿಸಲಿದ್ದಾರೆ ಎಂದರು.
35 ವಿದ್ಯಾರ್ಥಿಗಳು ಚಿನ್ನದ ಪದಕ ಸ್ವೀಕರಿಸಲಿದ್ದು, ಈ ಪೈಕಿ ಬಿ.ಟೆಕ್ ಎಲೆಕ್ಟ್ರಿಕಲ್
ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಬುರ್ರ ಮಸ್ತಾನ್ ವೇದಸಾಯಿ ಸಾಹಿತ್ಯ ನಿತಿನ್ ಪ್ರಥಮ ರ್ಯಾಂಕ್ ಜೊತೆಗೆ ಎರಡು ಚಿನ್ನದ ಪದಕಗಳಿಗೆ ಭಾಜನರಾಗಿದ್ದಾರೆ. ಎರಡು ಚಿನ್ನದ ಪದಕಗಳ ಪೈಕಿ ಪ್ರತಿಷ್ಠಿತ ಪೆÇ್ರ.ಎ.ಎಂ.ಪಠಾಣ್ ಚಿನ್ನದ ಪದಕವನ್ನು ಸಹ ಈ ವಿದ್ಯಾರ್ಥಿ ಸ್ವೀಕರಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಕನ್ನಡ ವಿಭಾಗದಲ್ಲಿ ಪ್ರಥಮ ರ್ಯಾಂಕ್ ಪಡೆದಿರುವ ಶೋಭಾ ಚಿನ್ನದ ಪದಕಕ್ಕೆ ಭಾಜನರಾಗಿದ್ದು, ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದಲ್ಲಿ ಪ್ರಥಮ ರ್ಯಾಂಕ್‍ನೊಂದಿಗೆ ಪದ್ಮಜಾ ಪಿ.ಜಿ. ಹಾಗೂ ಇಂಗ್ಲಿಷ್ ವಿಭಾಗದಲ್ಲಿ ಪ್ರಥಮ ರ್ಯಾಂಕ್ ಜೊತೆಗೆ ಎಚ್.ವಾಣಿ ಚಿನ್ನದ ಪದಕ ಪಡೆದಿದ್ದಾರೆ ಎಂದು ವಿವರಿಸಿದರು.
ವಿಶ್ವವಿದ್ಯಾಲಯದ ಕುಲಸಚಿವ ಪೆÇ್ರ.ಆರ್.ಆರ್.ಬಿರಾದಾರ್, ಪರೀಕ್ಷಾ ವಿಭಾಗದ ಕಂಟ್ರೋಲರ್ ಡಾ.ಕೋಟಾ ಸಾಯಿಕೃಷ್ಣ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
38 ಪಿ.ಎಚ್.ಡಿ ಪದವಿ ಪ್ರದಾನ:
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವದಲ್ಲಿ ಈ ಬಾರಿ 38 ಸಂಶೋಧನಾರ್ಥಿಗಳು ಪಿ.ಎಚ್.ಡಿ ಪದವಿ ಸ್ವೀಕರಿಸಲಿದ್ದಾರೆ ಎಂದು ಸಿಯುಕೆ ಕುಲಪತಿ ಪೆÇ್ರ.ಬಟ್ಟು ಸತ್ಯನಾರಾಯಣ ತಿಳಿಸಿದರು.
ಕನ್ನಡ ಅಧ್ಯಯನ ವಿಭಾಗದ ನಂದಪ್ಪ ಮಂಡಿಸಿರುವ ದಲಿತ ಚಳವಳಿಯ ಅನುಭವ ಕಥನ (ಗುಲ್ಬರ್ಗ ಜಿಲ್ಲೆಯನ್ನು ಅನುಲಕ್ಷಿಸಿ) ಮಹಾಪ್ರಬಂಧಕ್ಕೆ ಪಿ.ಎಚ್.ಡಿ ಪದವಿ ಸ್ವೀಕರಿಸಲಿದ್ದು, ಡಾ.ಅಪ್ಪಗೆರೆ ಸೋಮಶೇಖರ ಮಾರ್ಗದರ್ಶನ ಮಾಡಿದ್ದಾರೆ. ಇದರ ಜೊತೆಗೆ, ಭೂಗೋಳ, ಇಂಗ್ಲಿಷ್, ಅರ್ಥಶಾಸ್ತ್ರ, ವಾಣಿಜ್ಯ, ಮನಃಶಾಸ್ತ್ರ, ಭೌತಶಾಸ್ತ್ರ, ರಸಾಯನಶಾಸ್ತ್ರ ಸೇರಿದಂತೆ ವಿವಿಧ ವಿಷಯಗಳ ಮೇಲೆ ಸಂಶೋಧನಾರ್ಥಿಗಳು ಪಿ.ಎಚ್.ಡಿ ಪದವಿ ಸ್ವೀಕರಿಸಲಿದ್ದಾರೆ ಎಂದರು.