ವೀರಮಾರ್ಗ ನ್ಯೂಸ್ : ಧಾರವಾಡ : ಲೋಕಾಯುಕ್ತ ಇನ್ಸಪೆಕ್ಟರ್ ಪಂಚಾಕ್ಷರಿ ಸಾಲಿಮಠ ಇನ್ನಿಲ್ಲ
ಐ 20 ಕಾರಿನಲ್ಲಿಯೇ ಸಜೀವ ದಹನ
ಅಣ್ಣಿಗೇರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ
ಧಾರವಾಡ ಪ್ರಜಾಕಿರಣ.ಕಾಮ್ : ಐ 20 ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲಿಯೇ ಕಾರು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪೊಲೀಸ್ ಠಾಣೆ ವ್ಯಾಪ್ತಿ ಶುಕ್ರವಾರ ಸಂಜೆ ಏಳು ಘಂಟೆ ಸುಮಾರಿಗೆ ಸಂಭವಿಸಿದೆ.
ಕಾರ್ ನಲ್ಲಿದ್ದ ಹಾವೇರಿಯ ಲೋಕಾಯುಕ್ತ ಇನ್ಸ್‌ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಕಾರ್ ನಿಂದ ಹೊರಬರಲು ಸಾಧ್ಯವಾಗದೇ ಇದ್ದಿದ್ದರಿಂದ ಕಾರ್‌ನಲ್ಲಿಯೇ ಸಜೀವವಾಗಿ ದಹನವಾಗಿದ್ದಾರೆ ಎಂದು ಗೊತ್ತಾಗಿದೆ.
ಹಾವೇರಿಯ ಲೋಕಾಯುಕ್ತ ಇನ್ಸ್‌ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಅವರು ಹಾವೇರಿಯಿಂದ ಹುಬ್ಬಳ್ಳಿಯ ಮಾರ್ಗವಾಗಿ ಗದಗನತ್ತ ಪ್ರಯಾಣ ಬೆಳೆಸುತ್ತಿದ್ದರು. ಆದರೆ, ಅಣ್ಣಿಗೇರಿಯ ಭದ್ರಾಪುರ ಸೇತುವೆ ಬಳಿ ಈ ಘಟನೆ ಸಂಭವಿಸಿದೆ.
ಐ 20 ಕಾರ್ ಸಂಪೂರ್ಣ ಸುಟ್ಟು ಕರಕಲಾದ ಮಾಹಿತಿ ಅರಿಯುತ್ತಲೇ ಘಟನಾ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಅಣ್ಣಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.