Home » ಹಾಲಿನ ದರ ಏರಿಕೆಗೆ ಹೋಟೆಲ್‌ ಸಂಘಗಳ ವಿರೋಧ

ಹಾಲಿನ ದರ ಏರಿಕೆಗೆ ಹೋಟೆಲ್‌ ಸಂಘಗಳ ವಿರೋಧ

ವೀರಮಾರ್ಗ ನ್ಯೂಸ್ : ಬೆಂಗಳೂರು: ನಂದಿನಿ ಹಾಲು ದರ ಏರಿಕೆ ಪ್ರಸ್ತಾಪಕ್ಕೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ಭಾರಿ ವಿರೋಧ ವ್ಯಕ್ತಪಡಿಸಿದೆ. ಈ ಸಂಬಂಧ ರಾಜ್ಯ ಸರಕಾರ ಹಾಗೂ ಕರ್ನಾಟಕ ಹಾಲು ಮಹಾಮಂಡಳಗಳಿಗೆ ಪತ್ರ ಬರೆದಿರುವ ಸಂಘದ ಅಧ್ಯಕ್ಷ ಜಿ.ಕೆ ಶೆಟ್ಟಿ, ಒಂದೊಮೆ ದರ ಹೆಚ್ಚಳ ಮಾಡಿದರೆ ಹೋಟೆಲ್‌ ಉದ್ಯಮದ ಮೇಲೆ ಅದು ದೊಡ್ಡ ಮಟ್ಟದ ನಕಾರಾತಕ ಪರಿಣಾಮ ಬೀರಲಿದೆ ಎಂಬ ಕಳವಳ ವ್ಯಕ್ತಪಡಿಸಿದ್ದಾರೆ.
ಕಾಫಿ ಪುಡಿ ದರ ಆಕಾಶಕ್ಕೇರಿದೆ. ಈಗ ಹಾಲಿನ ಬೆಲೆ ಹೆಚ್ಚಳಗೊಂಡರೆ ಚಹಾ, ಕಾಫಿ ಯಂತಹ ನಾನಾ ಬಿಸಿ ಪಾನೀಯಗಳ ಬೆಲೆ ಏರಿಕೆ ಹೋಟೆಲ್‌ ಮಾಲೀಕರಿಗೆ ಅನಿವಾರ್ಯವಾಗಲಿದೆ.
ಇದು ರಾಜ್ಯದಲ್ಲಿ ಲಕ್ಷಾಂತರ ಕುಟುಂಬಗಳಿಗೆ ಜೀವನಾಧಾರವಾಗಿರುವ ಹಾಗು ಸರಕಾರ ಹಾಗು ಸ್ಥಳೀಯ ಸಂಸ್ಥೆಗಳಿಗೆ ದೊಡ್ಡ ಮಟ್ಟದ ತೆರಿಗೆ ಮೂಲವಾಗಿರುವ ಹೋಟೆಲ್‌ ಉದ್ಯಮ ಕ್ಷೇತ್ರಕ್ಕೆ ಕಂಟಕ ಪ್ರಾಯವಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಹೋಟೆಲ್‌ಗಳು ತಮ ಗ್ರಾಹಕರಿಗೆ ಆಹಾರ ಸುರಕ್ಷತಾ ನೀತಿಗೆ ಅನುಗುಣವಾಗಿ ಎಲ್ಲ ಶುಚಿತ್ವ ಹಾಗು ಗುಣಮಟ್ಟದ ನೀತಿಗಳನ್ನು ಅನುಸರಿಸುತ್ತಾ ಗುಣಮಟ್ಟದ ಚಹಾ, ಕಾಫಿ, ಹಾಗು ಇತರ ಪಾನೀಯಗಳನ್ನು ಒದಗಿಸುತ್ತವೆ. ಹಾಲಿನ ದರ ಹೆಚ್ಚಳಗೊಂಡರೆ, ಇವುಗಳ ಬೆಲೆ ಏರಿಕೆ ಅನಿವಾರ್ಯವಾಗಲಿದೆ.
ಆದರೆ ಕೆಲವರು ಸುರಕ್ಷತಾ ಮಾನದಂಡಗಳನ್ನು ಅನುಸರಿಸದೆ ಮಾರಾಟ ಮಾಡಲಾಗುವ ಚಹಾ, ಕಾಫಿ ಸೇವನೆ ಆರಂಭಿಸಬಹುದು. ಇದು ಸಾರ್ವಜನಿಕ ಆರೋಗ್ಯದ ಮೇಲೆ ದೊಡ್ಡ ಮಟ್ಟದ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ಜಿ.ಕೆ ಶೆಟ್ಟಿ ಅವರು ಎಚ್ಚರಿಸಿದ್ದಾರೆ. ಸರಕಾರ ಸಾರ್ವಜನಿಕ ಆರೋಗ್ಯ ಮತ್ತು ಹೋಟೆಲ್‌ ಉದ್ಯಮದ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು, ಹಾಲಿನ ಬೆಲೆ ಏರಿಕೆ ಪ್ರಸ್ತಾಪವನ್ನು ತಕ್ಷಣ ಕೈ ಬಿಡುವಂತೆ ಅವರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *