ವೀರಮಾರ್ಗ ನ್ಯೂಸ್ : ಹಾವೇರಿ : ಹಾವೇರಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (ಹಾವೇಮುಲ್‌ದ ನೂತನ ಅಧ್ಯಕ್ಷರಾಗಿ ಮಂಜನಗೌಡ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ಉಜ್ಜನಗೌಡ ಮಾವಿನತೋಪು ಅವಿರೋಧವಾಗಿ ಆಯ್ಕೆಯಾದರು.
ನಗರದ ಪಶು ಆಸ್ಪತ್ರೆ ಆವರಣದಲ್ಲಿನ ಹಾಲು ಒಕ್ಕೂಟದ ಕಚೇರಿಯಲ್ಲಿ ಸೋಮವಾರ ಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ಹಮ್ಮಿಕೊಳ್ಳಲಾಗಿತ್ತು. ಸದಸ್ಯರೆಲ್ಲ ಒಂದಾಗಿ ಚುನಾವಣೆ ನಡೆಸದೇ ಅವಿರೋಧವಾಗಿ ಆಯ್ಕೆ ಮಾಡಿದರು.
ಮಾ.೨ರಂದು ಒಕ್ಕೂಟದ ನಿರ್ದೇಶಕರ ಸ್ನಾನಗಳಿಗೆ ಚುನಾವಣೆ ನಡೆಸಲಾಗಿತ್ತು, ಸೋಮವಾರ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ತಲಾ ಒಂದು ನಾಮಪತ್ರ ಮಾತ್ರ ಸಲ್ಲಿಕೆಯಾಗಿತ್ತು. ಹಾಗಾಗಿ, ಚುನಾವಣಾ ರಿಟರ್ನಿಂಗ್ ಅಧಿಕಾರಿ ಅಜಿತ್‌ಉಲ್ಲಾ ಖಾನ್ ಅವರು ನಾಮಪತ್ರಗಳನ್ನು ಕ್ರಮಬದ್ಧಗೊಳಿಸಿ, ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅಧಿಕೃತವಾಗಿ ಘೋಷಣೆ ಮಾಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ನೂತನ ಅಧ್ಯಕ್ಷರು, ಉಪಾಧ್ಯಕ್ಷರನ್ನು ಸನ್ಮಾನಿಸಿದರು.

ಈ ವೇಳೆ ಶಾಸಕರಾದ ಯು.ಬಿ ಬಣಕಾರ, ಶ್ರೀನಿವಾಸ ಮಾನ, ಪ್ರಕಾಶ ಕೋಳಿವಾಡ, ಯಾಸೀರ್‌ಖಾನ್ ಪಠಾಣ, ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷ ಎಸ್.ಆರ್ ಪಾಟೀಲ, ಜಿಲ್ಲಾಧ್ಯಕ್ಷ ಎಂ.ಎಂ. ಹಿರೇಮಠ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಹುಡಾ ಅಧ್ಯಕ್ಷ ಎಸ್.ಎಫ್.ಎನ್. ಗಾಜಿಗೌಡ್ರ, ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ಹಾಲು ಒಕ್ಕೂಟದ ನಿರ್ದೇಶಕರಾದ ಬಸವೇಶಗೌಡ ಪಾಟೀಲ, ಪುಕಾಶ ಬನ್ನಿಹಟ್ಟಿ, ಅಶೋಕ ಪಾಟೀಲ, ಚಂದ್ರಪ್ಪ ಜಾಲಗಾರ, ತಿಪ್ಪಣ್ಣ ಸಾತಣ್ಣನವರ, ಶಶಿಧರ ಯಲಿಗಾರ, ನಾಮನಿರ್ದೇಶಿತ ಸದಸ್ಯ ಶಂಕರಗೌಡ ಪಾಟೀಲ, ವ್ಯವಸ್ಥಾಪಕ ನಿರ್ದೇಶಕ ಎಚ್.ಟಿ ಅಶೋಕಗೌಡ, ಮತ್ತಿತರರು ಉಪಸ್ಥಿತರಿದ್ದರು.