ವೀರಮಾರ್ಗ ನ್ಯೂಸ್ ಲಕ್ಷ್ಮೇಶ್ವರ : ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರು ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಲಕ್ಷ್ಮೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಹಿರೇಮಲ್ಲಾಪುರ ಗ್ರಾಮದ ವೀರಯ್ಯ ಶಿವಯ್ಯ ಹಿರೇಮಠ ಶಿಕ್ಷೆಗೆ ಒಳಗಾದ ಆರೋಪಿ ಆಗಿದ್ದಾನೆ.

ಘಟನೆ ವಿವರ : 2004ರ ಡಿ.8ರಂದು ಆರೋಪಿ ತನ್ನ ಹೆಂಡತಿ ಈರಮ್ಮ ಹಿರೇಮಠ ಅವರ ಶೀಲದ ಬಗ್ಗೆ ಶಂಕೆ ವ್ಯಕ್ತಪಡಿಸಿ ಕೊಲೆ ಮಾಡಿದ್ದ. ಈ ಕುರಿತು ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ ಅವರು ಪ್ರಕರಣ ರುಜುವಾತು ಆದ ಹಿನ್ನೆಲೆಯಲ್ಲಿ ಆರೋಪಿಗೆ ಜೀವಾವಧಿ ಶಿಕ್ಷೆಯೊಂದಿಗೆ 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಗದಗ ಅಭಿಯೋಜಕರಾದ ಸವಿತಾ ಎಂ.ಶಿಗ್ಲಿವಾದ ಮಂಡಿಸಿದ್ದರು.