ನಾಯ್ಕ ಅವರ ವಯೋನಿವೃತ್ತಿ ಬೀಳ್ಕೊಡುಗೆ ಸಮಾರಂಭ.

ಭೂಮಾಪಕ ಭೀಮಸೇನ ನಾಯ್ಕ ಅವರ ವಯೋನಿವೃತ್ತಿ ಬೀಳ್ಕೊಡುಗೆ ಸಮಾರಂಭ.

ವೀರಮಾರ್ಗ ನ್ಯೂಸ್ :ಧಾರವಾಡ ಜಿಲ್ಲಾ : ಹುಬ್ಬಳ್ಳಿ : ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಾರ್ಯಾಲಯ, ಹುಬ್ಬಳ್ಳಿಯಲ್ಲಿ ಭೂಮಾಪಕರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಭೀಮಸೇನ ನಾಯ್ಕ ಅವರ ಬೀಳ್ಕೊಡುಗೆ ಸಮಾರಂಭವು ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ಗೌರವಪೂರ್ವಕವಾಗಿ ಜರುಗಿತು.

ಸಮಾರಂಭಕ್ಕೆ ಬೃಹನ್ ಹೊಸಮಠ, ಅಕ್ಕಿಹೊಂಡ, ಹುಬ್ಬಳ್ಳಿಯ ಶ್ರೀ ಶ್ರೀ 1008 ಜಗವ ಸುತ್ತಿದ ಪ್ರಣವ ಪ್ರಖಾಂಡ ಸಂಸ್ಕೃತ ಪಂಡಿತರು, ಜಗದ್ಗುರು ಶಿವಯೋಗಿ ರಾಜಯೋಗೀಂದ್ರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದರು.

ಕಾರ್ಯಕ್ರಮವನ್ನು ಅಥಣಿ ಸರ್, ನ್ಯಾಯವಾದಿಗಳು ಉದ್ಘಾಟಿಸಿದರು. ಡೊಂಬರ ಸಮಾಜದ ಮುಖಂಡರಾದ ನಾರಾಯಣಪ್ಪ ಕಬ್ಬೇರ ಅವರು ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಧಾರವಾಡ ಜಿಲ್ಲಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಅಧ್ಯಕ್ಷರಾದ ಸಂಗನಗೌಡ ಹೂವನ್ನವರ, ಬಾಗಲಕೋಟೆ ಜಿಲ್ಲಾ ರೈತ ಸಂಘದ ಅಧ್ಯಕ್ಷ ಈರಣ್ಣ ಬಡಿಗೇರ, ನಿವೃತ್ತ ಕೆಎಸ್‌ಆರ್‌ಟಿಸಿ ಕಂಟ್ರೋಲರ್ ಯಲ್ಲಪ್ಪ ಬೆಳಹಾರ, ಸಾಮಾಜಿಕ ಕಾರ್ಯಕರ್ತೆ ಮಂಜುಳಾ ಮಜುತಿ, ಶಿಕ್ಷಕರು ಹಾಗೂ ಸಾಹಿತಿಗಳಾದ ಸಂಗನಬಸಯ್ಯ ಹಂಪಸಾಗರಮಠ, ವ್ಯಾಪಾರಸ್ಥರಾದ ಆರ್.ಎನ್. ನಾಯ್ಕ, ಅಂತರಾಷ್ಟ್ರೀಯ ಹಿಂದೂ ಮಹಾಸಭಾ ಯುವ ಘಟಕದ ರಾಜ್ಯಾಧ್ಯಕ್ಷ ಗೋಪಿ ಎನ್.ಜಿ. ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು, ಭೀಮಸೇನ ನಾಯ್ಕ ಅವರು ತಮ್ಮ ಸೇವಾವಧಿಯಲ್ಲಿ ಕರ್ತವ್ಯನಿಷ್ಠೆ, ಪ್ರಾಮಾಣಿಕತೆ ಹಾಗೂ ಜನಪರ ಕಾಳಜಿಯಿಂದ ಕಾರ್ಯನಿರ್ವಹಿಸಿದ್ದಾರೆ. ಭೂ ದಾಖಲೆಗಳ ಇಲಾಖೆಯಲ್ಲಿ ಸಲ್ಲಿಸಿದ ಅವರ ಸೇವೆ ಶ್ಲಾಘನೀಯವಾಗಿದ್ದು, ವಯೋನಿವೃತ್ತಿಯ ನಂತರವೂ ಅವರು ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲಿ ಎಂದು ಶುಭ ಹಾರೈಸಿದರು.

ಸಮಾರಂಭದಲ್ಲಿ ಭೀಮಸೇನ ನಾಯ್ಕ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಹೋದ್ಯೋಗಿಗಳು, ಕುಟುಂಬಸ್ಥರು, ಸ್ನೇಹಿತರು ಹಾಗೂ ಅಭಿಮಾನಿಗಳು ಅವರ ಸೇವೆಯನ್ನು ಸ್ಮರಿಸಿ ಶುಭಾಶಯಗಳನ್ನು ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಇಲಾಖೆಯ ಸಿಬ್ಬಂದಿ, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಹಲವಾರು ಗಣ್ಯರು ಉಪಸ್ಥಿತರಿದ್ದು, ಸಮಾರಂಭಕ್ಕೆ ಮೆರುಗು ತಂದರು.