ಆರೋಗ್ಯ ಸಮಸ್ಯೆಯಿಂದ ಬಳಳುತಿದ್ದ ನವವಿವಾಹಿತ ನವಜೋಡಿ ಆತ್ಮಹತ್ಯೆ ,,,!
ವೀರಮಾರ್ಗ ನ್ಯೂಸ್ : ಗದಗ ಜಿಲ್ಲಾ : ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನವವಿವಾಹಿತ ಜೋಡಿ ನೇಣಿಗೆ ಶರಣಾಗಿರುವ ಘಟನೆ ಗದಗ ತಾಲೂಕಿನ ಹುಲಕೋಟಿ ಗ್ರಾಮದಲ್ಲಿ ಜರುಗಿದೆ.

ವಿಕ್ರಮ ಶಿರಹಟ್ಟಿ(30), ಶಿಲ್ಪಾ (28), ಆತ್ಮಹತ್ಯೆ ಮಾಡಿಕೊಂಡ ದಂಪತಿ. ಶಿಲ್ಪಾಗೆ ಬಲ ಕಣ್ಣಿನ ಸಮಸ್ಯೆ ಇದ್ದರೆ, ವಿಕ್ರಮ ಗೆ ಉಸಿರಾಟದ ತೊಂದರೆ ಇತ್ತು. ಹೀಗಾಗಿ ಜೀವನದಲ್ಲಿ ಜಿಗುಪ್ಪೆಗೊಂಡು ತಮ್ಮ ಮನೆಯಲ್ಲಿಯೇ ಇಬ್ಬರು ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಏಪ್ರಿಲ್ 29 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಘಟನೆ ಬಗ್ಗೆ ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಗದಗ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ಎಲ್ ಕೆ ಜೂಲಕಟ್ಟಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಗ್ರಾಮೀಣ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.