
ಹಾವೇರಿ: ಮೈಲಾರ ಜಾತ್ರೆಗೆ ಹೊರಟಿದ್ದ ಎತ್ತಿನಗಾಡಿಗೆ
ಬೈಕ್ ಗುದ್ದಿದ ಪರಿಣಾಮ ಹನುಮನಮಟ್ಟಿ ಕೃಷಿ ವಿದ್ಯಾಲಯದ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಗುಡುಗೂರು ಕ್ರಾಸ್ ಬಳಿ ನಡೆದಿದೆ. ಶಶಿಕುಮಾರ್ ಉಪ್ಪಾರ (25), ಆಕಾಶ್ ಬಿರಾದಾರ (23) ಮತ್ತು ದರ್ಶನ್ (23) ಮೃತ ದುರ್ದೈವಿಗಳಾಗಿದ್ದು, ಈ ಮೂವರು ಹನುಮನಮಟ್ಟಿಯಿಂದ ಮೈಲಾರ ಜಾತ್ರೆಗೆ ಬೈಕ್‌ನಲ್ಲಿ ಹೊರಟಿದ್ದ ವೇಳೆ ಈ ಘಟನೆ ಸಂಭವಿಸಿದೆ. ದರ್ಶನ್ ಹಾಗೂ ಆಕಾಶ್, ಶಶಿಕುಮಾರ್ ಹನುಮನಮಟ್ಟಿ ಮೂರನೇ ವರ್ಷದ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರು.ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ…