
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ ಆರ್.ಬಿ.ಐ ಮಾರ್ಗಸೂಚಿ ಪಾಲನೆ ಕಡ್ಡಾಯ ಸಾಲ ಮಂಜೂರಾತಿ ಹಾಗೂ ವಸೂಲಾತಿ ನಿಯಮ ಬದ್ಧವಾಗಿರಲಿ
ವೀರಮಾರ್ಗ ನ್ಯೂಸ್ : CHITRADURGA JILLA : ಮೈಕ್ರೋ ಫೈನಾನ್ಸ್, ಲೇವಾದೇವಿ, ಗಿರವಿ ಹಣಕಾಸು ಸಂಸ್ಥೆಗಳು ಕಡ್ಡಾಯವಾಗಿ ಆರ್.ಬಿ.ಐ (ಭಾರತೀಯ ರಿಸರ್ವ್ ಬ್ಯಾಂಕ್) ಮಾರ್ಗಸೂಚಿ ಪಾಲನೆ ಮಾಡಬೇಕು. ಸಾಲ ಮಂಜೂರಾತಿ ಹಾಗೂ ವಸೂಲಾತಿ ನಿಯಮ ಬದ್ಧವಾಗಿರಬೇಕು. ಯಾವುದೇ ಕಾರಣಕ್ಕೂ ನಿಯಮಬಾಹಿರ ಮಾರ್ಗ ಅನುಸರಿಸಬಾರದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ ನೀಡಿದರು.ಸಾಲ ವಸೂಲಾತಿ ಸಮಯದಲ್ಲಿ ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳ ಹಾಗೂ ಅತಿಯಾದ ಬಡ್ಡಿ ವಿಧಿಸುತ್ತಿರುವ ಕುರಿತಂತೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಮೈಕ್ರೋ ಫೈನಾನ್ಸ್, ಲೇವಾದೇವಿ, ಗಿರವಿ…