ಮಹಿಳೆಯರೊಂದಿಗೆ ಸಂವಾದ ನಡೆಸಿದ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ
ಚಿಕ್ಕಪುರ ಗೊಲ್ಲರಹಟ್ಟಿ: ಮೌಢ್ಯ ಪದ್ಧತಿ ನಿರ್ಮೂಲನೆ ಕುರಿತು ಅರಿವು, ಜನರ ಸಮಸ್ಯೆ ಆಲಿಕೆ ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.05: ಚಿತ್ರದುರ್ಗ ತಾಲ್ಲೂಕಿನ ಚಿಕ್ಕಪುರ ಗೊಲ್ಲರಹಟ್ಟಿ ಗ್ರಾಮದಲ್ಲಿ ಮೌಢ್ಯ ಪದ್ಧತಿ ನಿರ್ಮೂಲನೆ ಕುರಿತು ಬುಧವಾರ ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಅವರು ಅರಿವು ಮೂಡಿಸಿದರು. ರಾಜ್ಯ ಮಹಿಳಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಲಕ್ಷ್ಮೀ ಸಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಚಿಕ್ಕಪುರ ಗೊಲ್ಲರಹಟ್ಟಿ ಗ್ರಾಮದಲ್ಲಿ ಮೌಢ್ಯ ಪದ್ಧತಿ ನಿರ್ಮೂಲನೆ ಕುರಿತು ಅರಿವು ಮೂಡಿಸುವ…