ಕ್ಯಾಸನೂರ ಗ್ರಾಮದಲ್ಲಿ 20 ಲಕ್ಷ ರೂ ವೆಚ್ಚದ ಕಾಮಗಾರಿಗೆ ಶಾಸಕ ಮಾನೆ ಚಾಲನೆ
ವೀರಮಾರ್ಗ ನ್ಯೂಜ್ ಹಾನಗಲ್ : ತಾಲೂಕಿನ ಕ್ಯಾಸನೂರು ಗ್ರಾಮದಲ್ಲಿ 2023-24 ನೇ ಸಾಲಿನ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ 20 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಗಟಾರ ನಿರ್ಮಾಣ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.ಗ್ರಾಮೀಣ ಪ್ರದೇಶಗಳಲ್ಲಿ ಅಗತ್ಯ ಮೂಲಸೌಕರ್ಯ ಒದಗಿಸಿದಾಗ ಜನತೆ ನೆಮ್ಮದಿಯಿಂದ ಬದುಕು ಸಾಗಿಸಲು ಸಾಧ್ಯವಿದೆ. ಹಾಗಾಗಿ ಹಂತ, ಹಂತವಾಗಿ ಮೂಲಸೌಕರ್ಯ ಒದಗಿಸಲು ಗಮನ ನೀಡಲಾಗಿದೆ. ಬೆಲೆ ಏರಿಕೆಯ ಬಿಸಿಯಿಂದ ಬಸವಳಿದಿದ್ದ ಜನಸಾಮಾನ್ಯರಿಗೆ ಗ್ಯಾರಂಟಿ ಯೋಜನೆಗಳು ನೆಮ್ಮದಿ ತರಿಸಿವೆ. ಗ್ಯಾರಂಟಿ…