ಡಿಸಿಸಿ ಬ್ಯಾಂಕ್‍ನ ಸಿಬ್ಬಂದಿಗಳ ಪ್ರಗತಿ ಪರಿಶೀಲನಾ ಸಭೆ.
ವೀರಮಾರ್ಗ ನ್ಯೂಸ್ : ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ರೈತರ ಸ್ವಾಭಿಮಾನದ ಸಂಕೇತವಾಗಿದ್ದು, ಮಂಡ್ಯ ಜಿಲ್ಲೆಯ ಸಮಸ್ತ ರೈತರ ಬ್ಯಾಂಕ್ ಆಗಿದೆ. ರೈತ ಬಾಂಧವರು ಡಿಸಿಸಿ ಬ್ಯಾಂಕ್ ನಲ್ಲಿ ವ್ಯವಹರಿಸಿ, ಸಾಲ ಪಡೆದ ಹಣವನ್ನು ಸದ್ಬಳಕೆ ಮಾಡಿಕೊಂಡು, ಬ್ಯಾಂಕಿನ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡಿ, ಅಭಿವೃದ್ಧಿಯ ಪಥದತ್ತ ಸಾಗಬೇಕು ಎಂದು ಬ್ಯಾಂಕಿನ ಅಧ್ಯಕ್ಷ ಸಚ್ಚಿನ್ ಚೆಲುವರಾಯಸ್ವಾಮಿ ಹೇಳಿದರು. ಅವರು ಕೃಷ್ಣರಾಜಪೇಟೆ ಪಟ್ಟಣದ ಎಸ್.ಎಂ.ಲಿಂಗಪ್ಪ ಸಹಕಾರ ಭವನದಲ್ಲಿ ನಡೆದ ಕೃಷ್ಣರಾಜಪೇಟೆ ತಾಲೂಕಿನ ಕೃಷಿ ಪತ್ತಿನ ಸಹಕಾರ ಸಂಘಗಳ…