ತಾಲೂಕಿನ 93 ಶಾಲೆಗಳಿಗೆ 1 ಕೋಟಿ 55 ಲಕ್ಷ ರೂ. ವೆಚ್ಚದಲ್ಲಿ ಸೌಲಭ್ಯ ಕಲ್ಪನೆ : ಶಾಸಕ ಶ್ರೀನಿವಾಸ
ವೀರಮಾರ್ಗ ನ್ಯೂಜ್ ಹಾನಗಲ್ : ದೇಶದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಸರಕಾರಿ ಶಾಲೆಗಳಿಗೆ ಸೌಲಭ್ಯ ಕಲ್ಪಿಸಲು ಕೈ ಜೋಡಿಸುವಂತೆ ನೀಡಿದ ಕರೆಗೆ ತಾಲೂಕಿನಲ್ಲಿ ಅಭೂತಪೂರ್ವ ಸ್ಪಂದನೆ ಸಿಕ್ಕಿದೆ. ಮಾತ್ರವಲ್ಲದೇ ಹಳೆ ಬೇರು, ಹೊಸ ಚಿಗುರು ಹೆಸರಿನಲ್ಲಿ ರಾಜ್ಯಮಟ್ಟದ ಕಾರ್ಯಕ್ರಮವಾಗಿ ರೂಪಗೊಳ್ಳಲು ಪ್ರೇರಣೆಯಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.ತಾಲೂಕಿನ ಅಕ್ಕಿಆಲೂರಿನ ಸಿ.ಜಿ. ಬೆಲ್ಲದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಬೇರು, ಚಿಗುರು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರಿ ಶಾಲೆ, ಕಾಲೇಜುಗಳು ಅಭಿವೃದ್ಧಿ…