೯ ತಿಂಗಳ ಬಾಹ್ಯಾಕಾಶ ವಾಸ ಅಂತ್ಯ : ಸುರಕ್ಷಿತವಾಗಿ ಭುವಿಗಳಿದ ಸುನಿತಾ, ಬುಚ್
ವಾಷಿಂಗ್ಟನ್ : ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಕ್ಷೇಮವಾಗಿ ವಾಪಸ್ ಆಗಿರುವ ನಾಲ್ವರು ಗಗನಯಾತ್ರಿಗಳನ್ನು ನಾಸಾ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಲ್ವರು ಗಗನಯಾತ್ರಿಗಳನ್ನು ಅವರು ಧರಿಸಿದ್ದ ವಿಶೇಷ ಸ್ಪೇಸ್ ಸೂಟ್ ನಲ್ಲೇ ಹೆಲಿಕಾಪ್ಟರ್ ಮೂಲಕ ಅವರನ್ನು ನಾನಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇಷ್ಟು ದಿನ ಬಾಹ್ಯಾಕಾಶದಲ್ಲಿದ್ದ ಕಾರಣ ಇಲ್ಲಿನ ವಾತಾವರಣಕ್ಕೆ ಗಗನಯಾತ್ರಿಗಳು ಹೊಂದಿಕೊಳ್ಳಬೇಕಿದೆ. ಅವರ ಆರೋಗ್ಯ ಸ್ಥಿತಿ ಸ್ಪಂದಿಸಬೇಕಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಿಸಿ ಅಗತ್ಯ ಚಿಕಿತ್ಸೆ ನೀಡಲಾಗುತ್ತೆ. ಸಮಗ್ರವಾಗಿ ತಪಾಸಣೆಗೆ ಒಳಪಡಿಸಲಾಗುತ್ತದೆ ಎಂದು ನಾಸಾ ತಿಳಿಸಿದೆ.ಕಡಲ ತೀರದ ಮೇಲೆ ಇಳಿದ ನೌಕೆಯಿಂದ…